ಆರೋಗ್ಯದ ಕಾಳಜಿ ವಹಿಸಲು ಸಲಹೆ

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಆರ್ಯವೈಶ್ಯ ಸಮಾಜದವರು ಅತ್ಯಂತ ದೈವಿ ಭಕ್ತರು. ಅವರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಮೂಲಕ ದೇವರಿಗೆ ನಮ್ಮ ಸೇವಾ ಕಾರ್ಯವನ್ನು ಸಮರ್ಪಣೆ ಮಾಡಿದಂತಾಗಿದೆ ಎಂದು ಬಾಲಾಜಿ ಆಸ್ಪತ್ರೆಯ ಚೇರ್ಮನ್ ಡಾ. ಕ್ರಾಂತಿಕಿರಣ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆರ್ಯ ವೈಶ್ಯ ಸಮಾಜ, ಶ್ರೀ ವಾಸವಿ ಮಹಿಳಾ ಮಂಡಳಿ, ಶ್ರೀ ಬಾಲಾಜಿ ನರರೋಗ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸಾ ಕೇಂದ್ರ ಹಾಗೂ ಜಯಪ್ರಿಯ ಕಣ್ಣಿನ ಆಸ್ಪತ್ರೆ ವತಿಯಿಂದ ಇಲ್ಲಿನ ಕಂಚಗಾರ ಗಲ್ಲಿಯ ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದರಿಂದ ಅನೇಕ ರೋಗಗಳಿಗೆ ತುತ್ತಾಗುವಂತಾಗಿದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಂಡು ಉತ್ತಮ ದೇಹಾರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಶ್ರೀ ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಸಂಧ್ಯಾ ತಾವರಗೇರಿ ಮಾತನಾಡಿದರು. ಉಪಾಧ್ಯಕ್ಷೆ ಸುನಿತಾ, ಪದಾಧಿಕಾರಿಗಳಾದ ಉಷಾ, ಗಾಯತ್ರಿ, ಗೌರಿ, ಮಾನಸಿ, ಪ್ರಮೀಳಾ, ವಿದ್ಯಾ, ಮುಖಂಡರಾದ ಪ್ರಶಾಂತ ಸವಣೂರ, ಡಾ. ರಾಜಶೇಖರ, ಡಾ. ಅಖಿಲೇಶ, ಡಾ. ಅಭಯಾಂಬಿಕಾ, ಡಾ. ಜಯಮೇಜಯ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net