ಆಸ್ಪತ್ರೆಯಲ್ಲೇ ಕಡತಗಳಿಗೆ ಸಹಿ

20Goa1b
Published on

ಪಣಜಿ: ಗೋವಾದ ಬಾಂಬೋಲಿಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ಗುಣಮುಖರಾಗುತ್ತಿದ್ದು, ಸದ್ಯ ಆಯುಷ್ ಮಂತ್ರಾಲಯದ ಪ್ರಮುಖ ಕೆಲಸಗಳನ್ನು ಆಸ್ಪತ್ರೆಯಿಂದಲೇ ನಡೆಸುತ್ತಿದ್ದಾರೆ.

ಆಸ್ಪತ್ರೆಯಿಂದಲೇ ಸರ್ಕಾರಿ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಇನ್ನು ನಾಲ್ಕು ದಿನದಲ್ಲಿ ಸಚಿವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ. ಅಂಕೋಲಾ ಬಳಿ ಸಂಭವಿಸಿದ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net