ಇಂಗ್ಲಿಷ್ ಶಿಕ್ಷಕರಿಂದ ಅರ್ಜಿ ಆಹ್ವಾನ

Application
Published on

ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಿಗೆ 2025-26 ನೇ ಸಾಲಿಗೆ ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಇಂಗ್ಲೀಷ್ ಭಾಷೆ ಬೋಧಿಸುವ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಬಿ.ಎ,ಬಿ.ಇಡಿ. ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಮತ್ತು ಸ್ವವಿವರಗಳೊಂದಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಪಡುವಾರಳ್ಳಿ, ಮೈಸೂರು ಇವರಿಗೆ ಅರ್ಜಿ ಸಲ್ಲಿಸಲು ಮೇ 27 ಒಳಗೆ ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9742099989 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಯೋಜನಾ ಸಮನ್ವಯಾಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net