ಇಂಟರ್‌ಲಾಕ್‌ಗೆ 40 ಲಕ್ಷ ರೂ. ಮಂಜೂರು

25 nrp 4 sports
ಎನ್.ಆರ್.ಪುರದ ಕುವೆಂಪು ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಡಾ.ಕೆ.ಪಿ.ಅಂಶುಮಂತ್, ಜುಬೇದಾ, ಪ್ರಶಾಂತ್.ಎಲ್.ಶೆಟ್ಟಿ, ವಸೀಂ, ಕೆ.ಎಂ.ಸುಂದರೇಶ್, ಪರುಷೋತ್ತಮ್, ಕೆ.ಎ.ಅಬೂಬೇಕರ್, ರುದ್ರಪ್ಪ, ಸರಸ್ವತಿ ಇತರರಿದ್ದರು.
Published on

ಎನ್.ಆರ್.ಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ರಂಗಮಂದಿರಕ್ಕೆ ಇಂಟರ್‌ಲಾಕ್ ಅಳವಡಿಕೆಗೆ 40 ಲಕ್ಷ ರೂ. ಮಂಜೂರು ಮಾಡಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುವೆಂಪು ಕ್ರೀಡಾಂಗಣದಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಗೆಲುವು ಸಾಧಿಸಿದವರಿಗೆ ಉದ್ಯೋಗದಲ್ಲೂ ಮೀಸಲಾತಿ ಸಿಗಲಿದೆ. ನಾನು ಶೃಂಗೇರಿ ಕ್ಷೇತ್ರದಲ್ಲಿ ಆರೋಗ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಕಟ್ಟಡಕ್ಕೆ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ತಾಲೂಕಿನ 7 ಪದವಿಪೂರ್ವ ಕಾಲೇಜಿಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಗುಂಪು ಆಟ ಹಾಗೂ ಅಥ್ಲೆಟಿಕ್ ನಡೆಯಿತು. ಶಾಸಕ ಟಿ.ಡಿ.ರಾಜೇಗೌಡ, ಡಾ. ಕೆ.ಪಿ.ಅಂಶುಮಂತ್, ದಾನಿ ಶ್ರೀಕಾಂತ್ ಹಾಗೂ ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪಪಂ ಅಧ್ಯಕ್ಷೆ ಜುಬೇದಾ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ, ಸದಸ್ಯ ವಸೀಂ, ಪಿಸಿಎಆರ್‌ಡಿ ಬ್ಯಾಂಕ್‌ನ ಅಧ್ಯಕ್ಷ ಕೆ.ಎಂ.ಸುಂದರೇಶ್, ದಾನಿ ಗದ್ದೇಮನೆ ಶ್ರೀಕಾಂತ್, ಎಸ್‌ಡಿಎಂಸಿ ಉಪಾಧ್ಯಕ್ಷ ಪುರುಷೋತ್ತಮ್, ಶೈಕ್ಷಣಿಕ ಗುಣಮಟ್ಟದ ಸಮಿತಿ ಅಧ್ಯಕ್ಷ ಕೆ.ಎ.ಅಬೂಬೇಕರ್,ಉಪ ಪ್ರಾಚಾರ್ಯ ರುದ್ರಪ್ಪ, ಎಸ್‌ಡಿಎಂಸಿ ಸದಸ್ಯರಾದ ದೇವೇಂದ್ರ, ಉದಯಗಿಲ್ಲಿ, ವಾಣಿ ನರೇಂದ್ರ, ಮೇಘನಾ, ಸಲೀಂ, ಪ್ರೀತಮ್, ವಸಂತಿ, ಶಕುಂತಲಾ, ಸರಸ್ವತಿ, ಡೇವಿಸ್, ಬೀನಾ, ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net