ಇದು ಪಾಪರ್ ಸರ್ಕಾರ, ಪೇಪರ್ ತೆಗೆದುಕೊಳ್ಳಲು ಕೂಡ ಕಾಸು ಇಲ್ಲ

R Ashok
Published on

ಖೋ ಖೋ ವಿಶ್ವಕಪ್ ವಿಜೇತರಿಂದ ಸರ್ಕಾರಕ್ಕೆ ಬಹುಮಾನ ವಾಪಸ್ ವಿಚಾರವಾಗಿ ಮಾತನಾಡಿದ ಆರ್.ಅಶೋಕ್ ಅವರು, ಸಿದ್ದರಾಮಯ್ಯ ಪರವಾಗಿ ನಾನು ನಿಮಗೆ ಮನವಿ ಮಾಡುತ್ತೇನೆ.

ದಯಮಾಡಿ ಬಹುಮಾನ ತೆಗೆದುಕೊಳ್ಳಿ. ಇದು ಪಾಪರ್ ಸರ್ಕಾರ. ಪೇಪರ್ ತೆಗೆದುಕೊಳ್ಳಲು ಕೂಡ ಕಾಸು ಇಲ್ಲ. ವಾಪಸ್ ಕೊಟ್ರೆ ಅದು ಸಿಗೋದಿಲ್ಲ. ಇತರೆ ರಾಜ್ಯಗಳು ಆರ್ಥಿಕವಾಗಿ ಸದೃಢವಾಗಿವೆ. ಅಲ್ಲಿ ಹೆಚ್ಚಿನ ಬಹುಮಾನ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರ ಹಣ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಹಿಂದೆ ಮನಮೋಹನ್ ಸಿಂಗ್ ಇದ್ದಾಗ ಎಷ್ಟು ಅನುದಾನ ತಂದಿದ್ದರು ಅವರು ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net