ಈಜು ಸ್ಪರ್ಧೆಯಲ್ಲಿ ಹಾರಿಕಾಗೆ ಮೂರು ಚಿನ್ನ

12
Published on

ಮೈಸೂರು: ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಎನ್.ಹಾರಿಕಾ ಅದ್ಭುತ ಈಜು ಪ್ರತಿಭೆಯನ್ನು ಪ್ರದರ್ಶಿಸಿ 3 ಚಿನ್ನ, 2ಕಂಚಿನ ಪದಕ ಪಡೆದು, ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ.

ಕೇಂದ್ರಿಯ ವಿದ್ಯಾಲಯ ಸಂಘಟನೆಯು ಆ.2ರಿಂದ 6ರವರೆಗೆ ನವದೆಹಲಿಯಲ್ಲಿ ಆಯೋಜಿಸಿದ್ದ 54ನೇ ರಾಷ್ಟ್ರಮಟ್ಟದ ಕ್ರೀಡಾಕೂಟವು ದೇಶದಾದ್ಯಾಂತ ಆಯ್ಕೆಯಾಗಿದ್ದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಒಳಗೊಂಡಿತ್ತು. ಇದರಲ್ಲಿ ಹಾರಿಕಾ ಅವರು ಈಜು ವಿಭಾಗದಲ್ಲಿ ತೀವ್ರ ಪೈಪೋಟಿ ನೀಡಿ ಸಾಧನೆ ಮಾಡಿದ್ದಾರೆ. 200 ಮೀ ಬ್ರೆಸ್ಟ್ ಸ್ಟ್ರೋಕ್, 100 ಮೀ.ಬ್ರೆಸ್ಟ್ ಸ್ಟ್ರೋಕ್, 50 ಮೀ.ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ, 2 ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಮೈಸೂರಿನ ಜೆ.ಪಿ.ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದ ಗ್ಲೋಬಲ್ ಸ್ಪೋರ್ಟ್ಸ್ ಅಸೋಸಿಯೇಷನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net