ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯ

19SGR1protest
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್‌ಯಿಂದ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಬಿ.ಆರ್.ಜಯಂತ್, ಜ್ಯೋತಿ ಕೋವಿ, ಕಲಸೆ ಚಂದ್ರಪ್ಪ, ಐ.ಎನ್.ಸುರೇಶಬಾಬು, ಮಧುಮಾಲತಿ ಇತರರಿದ್ದರು.
Published on

ಸಾಗರ: ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಮಂಗಳವಾರ ಬ್ಲಾಕ್ ಕಾಂಗ್ರೆಸ್‌ಯಿಂದ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು. ಕೆ.ಎಸ್.ಈಶ್ವರಪ್ಪ ಬೇರೆ ಜಾತಿಧರ್ಮ ಮತ್ತು ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ಶಾಂತಿ ಕದಡುವ ಪ್ರಯತ್ನ ನಡೆಸಿದ್ದಾರೆ. ಅವರ ಹೇಳಿಕೆ ವಿರುದ್ಧ ಈಗಾಗಲೆ ಎ್ಐಆರ್ ದಾಖಲಾಗಿದೆ. ಅವರ ಹೇಳಿಕೆಗಳು ಸಂವಿಧಾನ ವಿರೋಧಿಯಾಗಿದೆ. ಇಂತಹ ಹೇಳಿಕೆ ಸಮಾಜದಲ್ಲಿ ಪರಸ್ಪರ ದ್ವೇಷಕ್ಕೆ ಪ್ರಚೋದನೆ ನೀಡುವ ಜತೆಗೆ ದೇಶದ ಐಕ್ಯತೆಗೆ ಮಾರಕವಾಗಿದೆ. ಹೀಗಾಗಿ ಸರ್ಕಾರ ಕೂಡಲೆ ಈಶ್ವರಪ್ಪ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ತಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ಕೋವಿ, ಕಲಸೆ ಚಂದ್ರಪ್ಪ, ಐ.ಎನ್.ಸುರೇಶಬಾಬು, ಮಧುಮಾಲತಿ, ಉಷಾ, ಗಣಪತಿ ಮಂಡಗಳಲೆ, ತಾರಾಮೂರ್ತಿ, ಸಬೀನಾ, ಅನ್ವರ್ ಭಾಷಾ, ಕೃಷ್ಣಮೂರ್ತಿ, ಮೈಕೆಲ್ ಡಿಸೋಜ, ವಿಲ್ಸನ್ ಗೋನ್ಸಾಲ್ವಿಸ್, ಲಲಿತಮ್ಮ, ಜಾಕೀರ್, ರವಿಕುಮಾರ್, ಎಲ್.ಚಂದ್ರಪ್ಪ, ಅರ್ಥರ್ ಗೋಮ್ಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net