ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

12
Published on

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿ ಹಾರಿಸಿ ಹತ್ಯೆ ಮಾಡಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ(ಮಾರ್ಕ್ಸ್‌ವಾದಿ) ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಅವರು ಮೇಣದ ಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಮಾತನಾಡಿ, ಭಯೋತ್ಪಾದಕರಿಂದ 28 ಪ್ರವಾಸಿಗರ ಬರ್ಬರ ಹತ್ಯೆ ಅಮಾನವೀಯ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವ ಅಮಾಯಕರ ಕುಟುಂಬಗಳಿಗೆ ಸಿಪಿಐ(ಎಂ) ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತದೆ ಎಂದರು.

ಪಕ್ಷದ ಕಾರ್ಯದರ್ಶಿ ಎನ್.ಸುಬ್ರಹ್ಮಣ್ಯ, ಪದಾಧಿಕಾರಿಗಳಾದ ರಾಜೇಂದ್ರ, ಮೆಹಬೂಬ್, ಜಯರಾಮ್, ಬಾಲಾಜಿರಾವ್, ಬಲರಾಮ್, ಲ.ಜಗನ್ನಾಥ್, ವಿನಾಯಕ, ಸುಬ್ರಹ್ಮಣ್ಯ, ಕೃಷ್ಣಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net