ಉಡುಪಿಯಲ್ಲಿ ಎಂಆರ್ ಎಫ್ ಘಟಕ ನಿರ್ಮಾಣ: ಧ್ವಜಾರೋಹಣ ನೆರವೇರಿಸಿ ಸಚಿವ ಅಂಗಾರ

Published on

ಉಡುಪಿ: ಮೀನುಗಾರಿಕೆ, ಬಂದರು ಸಚಿವ ಅಂಗಾರ ಉಡುಪಿ ಜಿಲ್ಲೆಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಸಚಿವರು ಉಡುಪಿ ಜಿಲ್ಲೆ ಪ್ರವಾಸೋದ್ಯಮವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಮುಂದಿನ ದಿನಗಳಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗಲಿದೆ ಎಂದರು. ಸಮಗ್ರ ಘನತ್ಯಾಜ್ಯ ವಿಲೇವಾರಿ ಬಗ್ಗೆ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಅಲೆವೂರಲ್ಲಿ 1441.93 ಲಕ್ಷದಲ್ಲಿ ಎಂಆರ್ ಎಫ್ ಘಟಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ಶಾಸಕ ಕೆ.ರಘುಪತಿ ಭಟ್,ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ ಸಿಇಒ ನವೀನ್ ಭಟ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net