ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಿ

13.Pyp.01
Published on

ಪಿರಿಯಾಪಟ್ಟಣ: ರಾಮಾಯಣ ಮತ್ತು ಮಹಾಭಾರತದಲ್ಲಿನ ಉತ್ತಮ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸುಖಮಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಮಿವುಲ್ಲಾ ಅಭಿಪ್ರಾಯಪಟ್ಟರು.
ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ವಕೀಲರ ಸಂಘದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ‘ಧರ್ಮ ರಾಜ್ಯ ಸ್ಥಾಪನೆ’ ಪೌರಾಣಿಕ ನಾಟಕ ಪ್ರದರ್ಶನ ಮತ್ತು ಹಿರಿಯ ವಕೀಲರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ವಕೀಲ ವೃತ್ತಿ ಮಾಡುತ್ತಿದ್ದಾಗ ನಾಟಕಗಳಲ್ಲಿ ಭಾಗವಹಿಸುತ್ತಿದ್ದೆ. ಇದರಿಂದ ಕೆಲಸದ ಒತ್ತಡ ನಿವಾರಣೆಯಾಗಿ ಮನಸ್ಸಿಗೆ ಮುದ ನೀಡುತ್ತಿತ್ತು ಎಂದು ಸ್ಮರಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಆರ್.ಯೋಗೀಶ್ ಮಾತನಾಡಿ, ನಾಟಕ ಪ್ರದರ್ಶನದ ನೆಪದಲ್ಲಿ ವಕೀಲರು ಒಗ್ಗಟ್ಟಾಗಿರುವುದು ಉತ್ತಮ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.
ಶಾಸಕ ಕೆ.ಮಹದೇವ್ ಮಾತನಾಡಿ, ಕಕ್ಷಿದಾರರಿಗೆ ನ್ಯಾಯ ಕೊಡಿಸಲು ಹೋರಾಡುವ ವಕೀಲರು ಬಣ್ಣ ಹಚ್ಚಿ ನಟನೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶ್ವೇತಾ, ಬಿಜೆಪಿ ಮುಖಂಡ ಕೆ.ಎನ್.ಸೋಮಶೇಖರ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ರಾಜ್ಯ ವಕೀಲರ ಪರಿಷತ್ ಸದಸ್ಯ ಹರೀಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಸತೀಶ್ ಮಾತನಾಡಿದರು. ಸಮಾರಂಭದಲ್ಲಿ ಹಿರಿಯ ವಕೀಲರಾದ ಗೋವಿಂದ ಗೌಡ, ಬಿ.ವಿ.ಜವರೇಗೌಡ, ಎಚ್.ಡಿ.ಗೋವಿಂದೇಗೌಡ, ಬಿ.ಪಿ.ಪ್ರಭಾಕರ್, ಎಸ್.ಎಂ.ಪುರುಷೋತ್ತಮ್ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net