ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ರೇಷ್ಮೆ ಉತ್ಪಾದನಾ ಘಟಕ ಪ್ರಾರಂಭಿಸುವ ಕುರಿತು ಸರ್ಕಾರ ಪ್ರಯತ್ನ ನಡೆಸಿದೆ.
ರೇಷ್ಮೆ ಮಾರಾಟ ಮಂಡಳಿ ನಿಯಮಿತ ಅಧ್ಯಕ್ಷರಾದ ಸವಿತಾ ವಿ. ಅಮರಶೆಟ್ಟಿ ಅವರು ಕೇಂದ್ರ ರೇಷ್ಮೆ ಮಂಡಳಿಯ ಕಾರ್ಯದರ್ಶಿ ಒಕಂಡಿಯಾರ್ ನಿರ್ದೇಶಕ ಡಾ. ಸುಭಾಷ್ ವಿ. ನಾಕ್ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ಹಾಗೂ ಕೆ.ಎಸ್.ಐ.ಸಿ. ಸಹಯೋಗದೊಂದಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆಯೂ ವಿಚಾರ ವಿನಿಮಯ ಮಾಡಿದ್ದಾರೆ.
ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತಕ್ಕೆ ರೇಷ್ಮೆ ಪರೀಕ್ಷೆ ಸೌಲಭ್ಯಗಳನ್ನು ನೀಡುವ ಬಗ್ಗೆ ಮನವಿ ಮಾಡಿದ್ದಲ್ಲದೇ ರೇಷ್ಮೆ ನೂಲು ಬಿಚ್ಚಾಣಿಕೆ, ಹುರಿ, ನೇಯ್ಗೆ ಪರೀಕ್ಷೆ ಮಾಡುವ ವಿಧಾನಗಳನ್ನು ಪರಿವೀಕ್ಷಣೆ ಮಾಡಿ, ರೇಷ್ಮೆ ವಲಯದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಚರ್ಚಿಸಿದರು.