ಉದಯಗಿರಿ ಕಲ್ಲುತೂರಾಟ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿ ಜಾಮೀನು ಅರ್ಜಿ ವಜಾ

Crime Logo
Published on

ನಗರದ ಉದಯಗಿರಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಸ್ತಾಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೈಸೂರಿನ ನ್ಯಾಯಾಲಯ ವಜಾಗೊಳಿಸಿದೆ.

ಕಲು ್ಲತೂರಾಟ ಪ್ರಕರಣದ ನಂತರ ಮೌಲ್ವಿ ಮುಫ್ತಿ ಮುಸ್ತಾಕ್ ತಲೆ ಮರೆಸಿಕೊಂಡಿದ್ದರು. ಬಳಿಕ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಬಳಿಕ ಆರೋಪಿ ಮೌಲ್ವಿ ಜಾಮೀನು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net