

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಉಪ ಆರೋಗ್ಯ ಕೇಂದ್ರಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶುಕ್ರವಾರ ಹುಲ್ಯಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಥಮಿಕ ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ದುರಸ್ಥಿ ಕಾಮಗಾರಿಗಳ ಪರಿಶೀಲನೆ ಮಾಡಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಕೈಗೊಂಡ ಚರಂಡಿ ಕಾಮಗಾರಿ, ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿ ಮಾಹಿತಿಯನ್ನು ಪಡೆದುಕೊಂಡರು.
ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಮತ್ತು ವಾಟರ್ ಪಿಲ್ಟರ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಭೇಟಿ ಸಮಯದಲ್ಲಿ ಉಪ ಅರಣ್ಯ ಸಂರಕ್ಷಣಾಽಕಾರಿ ರುಥ್ರೇನ್, ಜಮಖಂಡಿ ಕಾರ್ಯನಿರ್ವಾಹಕ ಅಽಕಾರಿ ಸಂಜೀವ ಹಿಪ್ಪರಗಿ, ರಬಕವಿ-ಬನಹಟ್ಟಿ ತಾಲೂಕಿನ ಕಾರ್ಯನಿರ್ವಾಹಕ ಅಽಕಾರಿ ಸೈದಪ್ಪ ಪಟಿಹಾಳ, ಸಹಾಯಕ ನಿರ್ದೇಶಕ, ಪಂಚಾಯತ್ ರಾಜ್ ಅಭಿಯಂತರರು, ಪಂಚಾಯತ ಅಭಿವೃದ್ಧಿ ಅಽಕಾರಿಗಳು ಸೇರಿದಂತೆ ಇತರರು ಇದ್ದರು.