ಎಂ.ಆರ್.ರವಿಶಂಕರ್ ಕಾಂಗ್ರೆಸ್ ಸೇರ್ಪಡೆ

ravishankar
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಂ.ಆರ್.ರವಿಶಂಕರ್, ಇತರ ಬಿಜೆಪಿ ಮುಖಂಡರನ್ನು ಕಾಂಗ್ರೆಸ್‌ಗೆ ಸೇರ್ಪಡಿಸಿಕೊಂಡರು. ಟಿ.ಡಿ.ರಾಜೇಗೌಡ, ಎಂ.ಶ್ರೀನಿವಾಸ್, ಡಾ. ಕೆ.ಪಿ.ಅಂಶುಮಂತ್ ಇದ್ದರು.
Published on

ಎನ್.ಆರ್.ಪುರ: ತಾಲೂಕಿನ ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡ ಎಂ.ಆರ್.ರವಿಶಂಕರ್ ಸಂಗಡಿಗರೊಂದಿಗೆ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಂ.ಆರ್.ರವಿಶಂಕರ್, ಇತರ ಬಿಜೆಪಿ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡರು.
ಬಿಜೆಪಿ ಮುಖಂಡ ಎಂ.ಆರ್.ರವಿಶಂಕರ್ 20 ವಷರ್ಗಳಿಂದಲೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಶೃಂಗೇರಿ ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಸಂಘ ಪರಿವಾರದಲ್ಲೂ ಮುಂಚೂಣಿಯಲ್ಲಿದ್ದರು.
ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net