ಎಂಡಿಎಂಎ, ಗಾಂಜಾ ಪತ್ತೆ ಆರು ಮಂದಿ ಬಂಧನ ಅಬಕಾರಿ ಇಲಾಖಾಧಿಕಾರಿಗಳ ಕಾರ್ಯಾಚರಣೆ

Published on

ಮಂಗಳೂರು: ನಗರದ ವಿವಿಧ ಕಡೆ ಅಬಕಾರಿ ಇಲಾಖಾಧಿಕಾರಿಗಳು ಕಾರ್ಯಾಚರಣೆ ನಡೆಸಿ 1.50 ಗ್ರಾಂ ಎಂಡಿಎಂಎ ಡ್ರಗ್ಸ್, 100 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಸಹಿತ 6 ಮಂದಿಯನ್ನು ಬಂಧಿಸಿದ್ದಾರೆ.
ಅಲನ್, ವಿವೇಕ್, ಅಮೃತಾ ವಾಸ್, ಸಚಿನ್, ರೋಹನ್ ಮತ್ತು ನಭಾ ಎಂಬವರನ್ನು ಬಂಧಿಸಿದ್ದಾರೆ. ಒಟ್ಟು 7 ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು ದಕ್ಷಿಣ ವಲಯ 1ರ ಅಬಕಾರಿ ಇನ್‌ಸ್ಪೆಕ್ಟರ್ ಸೀಮಾ, ಸಬ್ ಇನ್‌ಸ್ಪೆಕ್ಟರ್‌ಗಳಾದ ಪ್ರತಿಭಾ ಜಿ., ಕಮಲ ಎಚ್.ಎನ್., ಸಿಬ್ಬಂದಿ ಸಂತೋಷ್ ಕುಮಾರ್, ಸುನಿಲ್ ಬೈಂದೂರ್, ಉಮೇಶ್ ಎಚ್., ಕುಮಾರ್, ವಿನಿತಾ, ಸಂದೀಪ್ ಕುಮಾರ್ ಮತ್ತು ಮನಮೋಹನ್ ಅವರ ತಂಡವು ಕಾರ್ಯಾಚರಣೆ ನಡೆಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net