ಎಎಸ್‌ಐ ಗಿರೀಶ್‌ಗೆ ಸಿಎಂ ಚಿನ್ನದ ಪದಕ

30kls2 girish
ಗಿರೀಶ್
Published on

ಕಳಸ: ಇಲ್ಲಿನ ಗುಪ್ತಚರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್‌ಐ ಗಿರೀಶ್ ಅವರಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಸರ್ಕಾರದಿಂದ ಘೋಷಣೆ ಆಗಿದೆ.

ಕೊಪ್ಪ ತಾಲೂಕು ಜಯಪುರ ನಿವಾಸಿಯಾಗಿರುವ ಇವರು ಈ ಹಿಂದೆ ಚಿಕ್ಕಮಗಳೂರು ಎಸ್‌ಪಿ ಕಚೇರಿಯಲ್ಲಿ, ಜಯಪುರದಲ್ಲಿ ಹಾಗೂ ನಕ್ಸಲ್ ನಿಗ್ರಹ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅದರಲ್ಲೂ ಮುಖ್ಯವಾಗಿ ನಕ್ಸಲ್ ರವೀಂದ್ರನ ಶರಣಾಗತಿಯಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಏ.2ರಂದು ಬೆಂಗಳೂರಿನಲ್ಲಿ ನಡೆಯುವ ಪೊಲೀಸ್ ಧ್ವಜ ದಿನಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಗಿರೀಶ್ ಚಿನ್ನದ ಪದಕ ಸ್ವೀಕರಿಸಲಿದ್ದಾರೆ.

ಎರಡನೇ ಬಾರಿ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ರಾಜ್ಯದ ಕೆಲವೇ ಮಂದಿ ಪೊಲೀಸರ ಪೈಕಿ ಇವರು ಒಬ್ಬರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡನೇ ಬಾರಿ ಈ ಪದಕ ಪಡೆದವರಲ್ಲಿ ಮೊದಲನೆಯವರಾಗಿದ್ದಾರೆ. ಈ ಹಿಂದೆ 2015 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಇವರಿಗೆ ದೊರೆತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net