ಎರಡು ಕಾರುಗಳ ಡಿಕ್ಕಿ / ಇಬ್ಬರು ಸಾವು

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಚೆನ್ನೈ ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಎರಡು ಕಾರುಗಳ ಮಧ್ಯೆ ಸೋಮವಾರ ಸಂಜೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಲೂರು ತಾಲ್ಲೂಕು ವಕ್ಕಲೇರಿ ಟೋಲ್ ಬಳಿ ಈ ಅಪಘಾತ ಸಂಭವಿಸಿದೆ.

ಅಡಿ ಕಾರು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪೋಲೋ ಕಾರಿಗೆ ಡಿಕ್ಕಿ ಆಗಿ ಪೋಲೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಈಶ್ವರ್ (೨೭), ಜನನಿ (೨೪) ಮೃತರಾಗಿದ್ದಾರೆ. ಅಡಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಇತ್ತೀಚೆಗೆ ಬೆಂಗಳೂರು ಚೈನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಇಂತಹ ಭಯಾನಕ ಘಟನೆಗಳು ಸಂಭವಿಸುತ್ತಿರುವುದು ಹೆದ್ದಾರಿ ಅವೈಜ್ಞಾನಿಕ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಚಿತ್ರ ೧೫ ಕೆ.ಎಲ್.ಆರ್. ೦೮ : ಅಪಘಾತಕ್ಕೀಡಾಗಿರುವ ಪೋಲೋ ಕಾರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net