

ಸಿದ್ದಾಪುರ: ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ಗ್ರಾಮದ ನೇತಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಯನ್ನು ಸೋಮವಾರ ರಂರಭಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕವಿತಾ, ತರಗತಿಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಬಡ ಮಕ್ಕಳು, ಮಧ್ಯಮ ವರ್ಗದ ಮಕ್ಕಳು ಕೂಡ ಆಂಗ್ಲ ಭಾಷೆ ಕಲಿಯುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಹೊಸ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಅಂಗನವಾಡಿ ಮಕ್ಕಳಿಗೆ ಚೇರ್, ಜಮಾಖಾನ, ಸಮವಸ್ತ್ರವನ್ನು ವಿತರಿಸಲಾಯಿತು. ಸದಸ್ಯರಾದ ಯೂಸುಫ್ ಅಲಿ, ಉಷಾ ತಂಗಮ್ಮ, ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ, ಕಾರ್ಯದರ್ಶಿ ತೇಜಸ್ ಕುಮಾರ್, ಅಂಗನವಾಡಿ ಮೇಲ್ವಿಚಾರಕಿ ಸವಿತಾ, ಸಮುದಾಯದ ಆರೋಗ್ಯಾಧಿಕಾರಿ ಪುಷ್ಪಾ ಬಡಿಗೇರ್, ಆಶಾ ಕಾರ್ಯಕರ್ತೆಯರು ಇದ್ದರು.