ಎಲ್ಲರಿಗೂ ಕಣ್ಣಿನ ತಪಾಸಣೆ ಅಗತ್ಯ

10chn5
Published on

ಚಾಮರಾಜನಗರ: ಪ್ರತಿಯೊಬ್ಬರಿಗೂ ಕಣ್ಣಿನ ತಪಾಸಣೆ ಅತ್ಯಗತ್ಯ ಎಂದು ಎಚ್.ಕೆ.ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ಕೃಷ್ಣಸ್ವಾಮಿ ಹೇಳಿದರು.

ಕೊಳ್ಳೇಗಾಲ ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆಯಲ್ಲಿ ಎಚ್.ಕೆ.ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

ಬಡವರ ಪರ ಧ್ವನಿಯಾಗಿದ್ದ ನನ್ನ ಪತಿ ಕೃಷ್ಣಸ್ವಾಮಿ ಅವರ ಆಶಯದಂತೆ ನೊಂದ ಕುಟುಂಬಗಳ ಪರವಾಗಿ ನಮ್ಮ ಸಂಸ್ಥೆ ವತಿಯಿಂದ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ. ಬಡವರ ಅನುಕೂಲಕ್ಕಾಗಿ ಕಳೆದ 16 ತಿಂಗಳಿಂದ ಎರಡನೇ ಭಾನುವಾರ ಕಣ್ಣಿನ ಉಚಿತ ತಪಾಸಣೆ ಶಿಬಿರವನ್ನು ನಡೆಸಲಾಗುತ್ತದೆ. ಇದರ ಉಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಬಿರದಲ್ಲಿ 146 ಜನ ತಪಾಸಣೆ ಮಾಡಿಸಿಕೊಂಡರು. 37 ಜನರನ್ನು ಶಸ್ತ್ರಚಿಕಿತ್ಸೆಗಾಗಿ ಕೊಯಮತ್ತೂರು ಕಣ್ಣಾಸ್ಪತ್ರೆಗೆ ಕಳುಹಿಸಲಾಯಿತು. ಶಿಬಿರದಲ್ಲಿ ರೋಟರಿ ಮಿಡ್ ಟೌನ್ ಸಂಸ್ಥೆ ಅಧ್ಯಕ್ಷ ದಕ್ಷಿಣಮೂರ್ತಿ, ರೋಟರಿ ಸಂಸ್ಥೆ ಕಾರ್ಯದರ್ಶಿ ಪ್ರಸನ್ನ ಕುಮಾರ್, ಎಂಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಕುಮಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಜೆ.ಹರ್ಷ, ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ದಿವ್ಯಾರೋಸ್ ಮತ್ತು ಡಾ.ಎಂ.ಎನ್.ವಿಮಿಶ, ಅರವಿಂದ ಕಣ್ಣಿನ ಆಸ್ಪತ್ರೆ ಸಂಯೋಜಕ ವಿಜಯ್ ಕುಮಾರ್, ಸಂಸ್ಥೆ ವ್ಯವಸ್ಥಾಪಕ ರವೀಂದ್ರ, ರಾಜಶೇಖರ್, ಮೋಹನ್ ಕುಮಾರ್, ಅರುಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net