ಎಲ್ಲರೂ ರಕ್ತದಾನಕ್ಕೆ ಮುಂದಾಗಲಿ

22kabbur1
Published on

ಕಬ್ಬೂರು: ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಯಲು ಸಾಧ್ಯ. ಹಾಗಾಗಿ ಪ್ರತಿಯೊಬ್ಬರೂ ರಕ್ತದಾನಕ್ಕೆ ಮುಂದಾಗಬೇಕು ಎಂದು ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ರಾಜೇಂದ್ರ ಕನದಾಳೆ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿಬಿರದಲ್ಲಿ ೮೩ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಡಾ.ರಾಘವೇಂದ್ರ ಪರೀಟ್, ಪಾತೀಮಾ ಸಂಗೊಳ್ಳಿ, ನಸಿಮಾ ಗೋಕಾಕ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net