ಮಂಗಳೂರು: ಸಮಾಜ ವಿರೋಧಿ ಚಟುವಟಿಕೆ ನಡೆಸುತ್ತಿರುವ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸಮಾಜ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಇದರಲ್ಲಿ ಎಸ್ ಡಿಪಿಐ ಮತ್ತು ಪಿಎಫ್ಐ ಕುಮ್ಮಕ್ಕು ಇದೆ ಎಂದು ವಿಎಚ್ ಪಿ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿರುವುದನ್ನು ಖಂಡಿಸಿ ಹಾಗೂ ಎಸ್ ಡಿಪಿಐ ಕಾರ್ಯಕರ್ತ ಸಿದ್ದಿಕಿ ಮಹಿಳೆಯೋರ್ವರಿಗೆ ಕಿರುಕುಳ ನೀಡಿರುವುದನ್ನು ವಿರೋಧಿಸಿ ಜ.25 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.