ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಮತದಾನ ಜಾಗೃತಿ

bkt-6-2
ಮುಧೋಳ ನಗರದ ಪರಿಶಿಷ್ಟ ಜಾತಿ ಕಾಲೋನಿಗಳಾದ ಸುಡುಗಾಡು ಸಿದ್ದರ ಹಾಗೂ ಬಂಜಾರ ತಾಂಡಾಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.
Published on

ಬಾಗಲಕೋಟೆ: ಸಮಾಜ ಕಲ್ಯಾಣ ಇಲಾಖೆಯಿಂದ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಯೋಜನೆಯಡಿ ಮುಧೋಳ ನಗರದ ಪರಿಶಿಷ್ಟ ಜಾತಿ ಕಾಲೋನಿಗಳಾದ ಸುಡುಗಾಡು ಸಿದ್ದರ ಹಾಗೂ ಬಂಜಾರ ತಾಂಡಾಗಳಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಂದಾ ಹನಮರಟ್ಟಿ ಮಾತನಾಡಿ, ಭಾರತ ದೇಶದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿತನಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರರು ಮತದಾನ ಮಾಡುವುದು ಅವಶ್ಯವಾಗಿದೆ. ಯಾವುದೇ ಆಮೀಷಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕÀ ಮೋಹನ ಕೋರಡ್ಡಿ ಮಾತನಾಡಿ, ಚುನಾವಣೆ ಆಯೋಗವು ಪ್ರಸಕ್ತ ೨೦೨೩ - ವಿಧಾನಸಭಾ ಚುನಾವಣೆಯಲ್ಲಿ ೮೦+ ಹೆಚ್ಚಿಗೆ ವಯಸ್ಸಾದವರಿಗೆ ಹಾಗೂ ಅಂಗವಿಕಲರಿಗೆ ಮನೆಯಲ್ಲಿಯೇ ಇದ್ದು ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿದ್ದು, ಅದರ ಉಪಯೋಗವನ್ನು ಪಡೆಯುವಂತೆ ತಿಳಿಸಿದರು.

ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಽಕಾರಿ ಕೀರಣ ಘೋರ್ಪಡೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ ಕೋರಡ್ಡಿ, ಕಂದಾಯ ಇಲಾಖೆಯ ಶಿರಸ್ತೇದಾರ್ ಎಸ್.ಐ ಘಾಟ್ನಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಿಬ್ಬಂದಿ ವರ್ಗದವರು, ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net