ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ

HUN-SEP-12-3(SDPI STRIKE)
ಹುಣಸೂರು ನಗರದ ಸಂವಿಧಾನವೃತ್ತದ ಬಳಿ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಯ್ಯದ್ ಅಕ್ಬರ್, ಸಯ್ಯದ್ ಯೂನೂಸ್, ಮಹಮದ್ ತಬ್ರೇಜ್ ಇತರರಿದ್ದರು.
Published on

ಹುಣಸೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಫರಂಗಿಪೇಟೆ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರ ಪ್ರಾಯೋಜಿತ ಎನ್‌ಐಎ ದಾಳಿ ನಡೆಸಿದೆ ಆರೋಪಿಸಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.


ನಗರದ ಸಂವಿಧಾನ ವೃತ್ತದ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಸಯ್ಯದ್ ಅಕ್ಬರ್ ಮಾತನಾಡಿ, ಇಂತಹ ಪ್ರಜಾತಂತ್ರ ವಿರೋಧಿ ಕ್ರಮವನ್ನು ಪಕ್ಷ ಬಲವಾಗಿ ಖಂಡಿಸುತ್ತದೆ. ಪುತ್ತೂರಿನ ಪ್ರವೀಣ್ ನೆಟ್ಯಾರು ಹತ್ಯೆ ಪ್ರಕರಣದಲ್ಲಿ ಪಕ್ಷದ ಯಾವುದೇ ಪಾತ್ರವಿಲ್ಲ. ಹೀಗಿದ್ದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಫರಂಗಿಪೇಟೆ ಅವರ ನಿವಾಸದ ಮೇಲೆ ಎನ್‌ಐಎ ದಾಳಿ ನಡೆಸಿದೆ. ಪಕ್ಷವನ್ನು ಹತ್ತಿಕ್ಕಲು ಷಡ್ಯಂತ್ರ ನಡೆದಿದೆ. ಇಂತಹ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತದೆ ಎಂದರು.

ತಾಲೂಕು ಅಧ್ಯಕ್ಷ ಮಹಮದ್ ತಬ್ರೇಜ್, ಉಪಾಧ್ಯಕ್ಷ ಸದ್ದಾಂ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಖಾನ್, ಕಾರ್ಯದರ್ಶಿ ಅಕ್ಮಲ್, ನಗರಸಭಾ ಸದಸ್ಯ ಸಯ್ಯದ್ ಯೂನೂಸ್, ಸಮೀನಾ ಖಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net