ಏ.೫ ರಿಂದ ಎರಡು ದಿನಗಳು ಅದ್ಧೂರಿ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೋಲಾರ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಏ.೫ ಮತ್ತು ೬ ರಂದು ಎರಡು ದಿನಗಳ ಕಾಲ ನಗರದ ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ಶುಕ್ರವಾರ ಅಪರ ಜಿಲ್ಲಾಧಿಕಾರಿ ಮಂಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಜಿಲ್ಲಾ ಕ್ರೀಡಾ ಸಮಿತಿ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಅಜಯ್‌ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿನ ಸರ್ಕಾರಿ ನೌಕರರ ಬಂಧುಗಳು ಇಂದಿನಿAದಲೇ ತಮ್ಮ ನೆಚ್ಚಿನ ಸ್ಪರ್ಧೆ, ಕ್ರೀಡೆಗಳಲ್ಲಿ ಅಭ್ಯಾಸ ಪ್ರಾರಂಭಿಸಲು, ತಮ್ಮ ಇಲಾಖೆಗಳಲ್ಲಿನ ನೌಕರರನ್ನು ಪ್ರೇರಣೆ ನೀಡಿ ಪ್ರೋತ್ಸಾಹ ಮಾಡಬೇಕಾಗಿದೆ. ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಕ್ರೀಡಾಕೂಟವನ್ನು ಏಪ್ರಿಲ್ ೫ ರಂದು ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಟಿ.ಚನ್ನಯ್ಯ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗುವುದು. ಅದ್ದೂರಿಯಾಗಿ ಕ್ರೀಡಾಕೂಟವನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಸರ್ಕಾರಿ ನೌಕರರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕಿ ಗೀತಾ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಪ್ರಧಾನ ಕಾರ್ಯದರ್ಶಿ ಸತೀಶ್, ಖಜಾಂಚಿ ಮುರಳಿ ಮೋಹನ್, ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್ ಚೌಡಪ್ಪ, ಕನ್ನಡ ಮತ್ತು ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ ನಾಗರಾಜ್, ದೈಹಿಕ ಶಿಕ್ಷಕರ ಸಂಘದ ನಾಗರಾಜ್, ಇಂಚರ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರಿ ನೌಕರರ ಇದ್ದರು.

ಚಿತ್ರ ೧೪ ಕೆ.ಎಲ್.ಆರ್. ೦೨ : ಸರ್ಕಾರಿ ನೌಕರರಿಗೆ ಕ್ರೀಡಾಕೂಟ ನಡೆಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಅಪರ ಜಿಲ್ಲಾಧಿಕಾರಿ ಮಂಗಳ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ರವಿಶಂಕರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ. ಅಜಯ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net