

ಉತ್ತರ ಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಷನ್‌ನ ಅಧ್ಯಕ್ಷ ಆರ್ಯನ್ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಏಕಾಂಗಿಯಾಗಿ ಪ್ರತಿಭಟಿಸಿದರು.
19 ವರ್ಷದ ಯುವತಿಯನ್ನು ಅಪಹರಿಸಿ, ಒಂದು ವಾರದಲ್ಲಿ 23 ಪುರುಷರಿಂದ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಹೃದಯ ವಿದ್ರಾವಕ ಘಟನೆ ವಾರಾಣಸಿಯಲ್ಲಿ ನಡೆದಿದೆ. ಈ ಸಂಬಂಧ ಏ.6ರಂದು ಲಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಮೌನ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಇತ್ತೀಚೆಗೆ ಅತ್ಯಾಚಾರದಂತ ಪ್ರಕರಣ ನಡೆಯುತ್ತಿದ್ದು, ಜನ ಸಾಮಾನ್ಯರು ತಲೆ ತಗ್ಗಿಸುವಂತಾಗಿದೆ ಎಂದು ಅವರು ಟೀಕಿಸಿದ್ದಾರೆ.