

ವಿಜಯಪುರ : ನವದೆಹಲಿಯ ಏಮ್ಸ್ (ಎಐಐಎಂಎಸ್) ನಡೆಸಿದ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ದಿವ್ಯಾ ಅರವಿಂದ ಹಿರೊಳ್ಳಿ ಅವರು ಡಿಎಂ-ಜನರಲ್ ಕ್ರಿಟಿಕಲ್ ಕೇರ್ ಮೆಡಿಷಿನ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಮೂಲಕ ದೇಶಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ನ.20 ರಂದು ನಡೆದಿದ್ದ ಏಮ್ಸ್ ಪ್ರವೇಶ ಪರೀಕ್ಷಾ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಡಿಎಂ-ಜನರಲ್ ಕ್ರಿಟಿಕಲ್ ಕೇರ್ ಮೆಡಿಷಿನ್ ವಿಭಾಗದಲ್ಲಿ
ದಿವ್ಯಾ ಹಿರೊಳ್ಳಿ ಒಟ್ಟು ಶೇ.67.83 ಅಂಕ ಗಳಿಸುವ ಮೂಲಕ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ನಲ್ಲಿ ಹಿರಿಯ ವಕೀಲರಾಗಿರುವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿರುವ ದಿವ್ಯಾ ಅವರು ಬಿಎಲ್ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನಲ್ಲಿ 2012 ರಲ್ಲಿ ವೈದ್ಯಕೀಯ ಪದವಿ ಪಡೆದಿದ್ದು, 2016 ರಲ್ಲಿ ಹುಬ್ಬಳ್ಳಿ ಕಿಮ್ಸ್ನಲ್ಲಿ ಎಂಡಿ ಪದವಿ ಪಡೆದಿದ್ದಾರೆ. ಬಳಿಕ ಪಾಂಡಿಚೇರಿ ಫೆಲೋಶಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ನಿರೊ ಕ್ರಿಟಿಕಲ್ಕೇರ್ನಲ್ಲಿ ಫೆಲೋಶಿಪ್ ಪಡೆದುಕೊಂಡಿದ್ದಾರೆ.