

ಬಿಲಾಸ್ಪುರ: ಕರೋನವೈರಸ್ ಗೆ ಚಿಕಿತ್ಸೆ ನೀಡುವ ನೆಪದಲ್ಲಿ 7 ವರ್ಷದ ಬಾಲಕಿಯನ್ನು ಅಪಹರಿಸಿದ ಇಬ್ಬರು ಬಾಲಕರು ಆಕೆಯ ಮೇಲೆ ಅತ್ಯಾಚಾರಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛತ್ತೀಸಗಢದ ಗೌರೆಲಾ-ಪೆಂಡ್ರಾ-ಮಾರ್ವಾಹಿ (ಜಿಪಿಎಂ) ಜಿಲ್ಲೆಯಲ್ಲಿ ಜುಲೈ1 ರಂದು ಈ ಘಟನೆ ನಡೆದಿದ್ದು, ಇಬ್ಬರು ಬಾಲಕರನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ ಎಂದು ಮಾರ್ವಾಹಿ ಠಾಣಾಧಿಕಾರಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
"ಬಾಲಕಿ ಕಾಡಿನಿಂದ ಕಟ್ಟಿಗೆ ಸಂಗ್ರಹಿಸಿಕೊಂಡು ಮನೆಗೆ ಹಿಂದಿರುಗುತ್ತಿರುವಾಗ ಇಬ್ಬರು ಹುಡುಗರು ಅಲ್ಲಿಗೆ ಬಂದು ಅವಳಿಗೆ ಕರೊನಾವೈರಸ್ ಸೋಂಕು ತಗುಲಿದೆ ಎಂದು ಹೇಳಿ ಚಿಕಿತ್ಸೆ ನೀಡುವ ನೆಪದಲ್ಲಿ ಅವಳನ್ನು ಆರೋಪಿಗಳ ಪೈಕಿ ಒಬ್ಬಾತನ ಮನೆಗೆ ಕರೆದೊಯ್ದು ಅಲ್ಲಿ ಅವಳ ಮೇಲೆ ಅತ್ಯಾಚಾರವೆಸಗಿದರು. ನಂತರ ಆಕೆ ಮನೆಗೆ ಹೋಗಿ ನಡೆದ ಘಟನೆಯನ್ನು ಸಂಬಂಧಿಕರಿಗೆ ತಿಳಿಸಿದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಬಾಲಕರ ವಿರುದ್ಧ ಐಪಿಸಿ ಸೆಕ್ಷನ್ 363 (ಅಪಹರಣ) ಮತ್ತು 376 ಡಿ (ಸಾಮೂಹಿಕ ಅತ್ಯಾಚಾರ) , ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.