ಮಂಗಳೂರು : ಭಾರತೀಯ ವೈದ್ಯಕೀಯ ಸಂಘದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ ಘಟಕ (ಐಎಂಎ-ಸಿಜಿಪಿ) ನಿರ್ದೇಶಕರಾಗಿ ಮಂಗಳೂರಿನ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆಯಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾಗಿರುವ ಡಾ.ಕುಲಾಲ್ ಅವರು ರಾಜ್ಯ ಐಎಂಎಯಿಂದ ಡಾ.ಬಿ.ಸಿ.ರಾಯ್ ಪ್ರಶಸ್ತಿ , ಕರ್ನಾಟಕ ಸರ್ಕಾರದಿಂದ ಡಿ. ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು.