ಒಂದು ಛಾಯಚಿತ್ರ ಸಾವಿರ ಪದಗಳಿಗೆ ಸಮ: ಸಿ.ಎಂ‌.ಸಿದ್ದರಾಮಯ್ಯ

CM Siddaramaiah 1
Published on

ಮಾಧ್ಯಮದಲ್ಲಿ  ಒಂದು ಛಾಯಚಿತ್ರ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಲೇಖನಿ ಹಾಗೂ ಕ್ಯಮರಾ ಮಾಧ್ಯಮದ ಮುಖ್ಯ ಅಸ್ತ್ರಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್ ಗಳಿಗೆ "ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ" ವಿತರಿಸಿ ಮಾತನಾಡಿದರು.

ಫೋಟೋ ಜರ್ನಲಿಸ್ಟ್ ಗಳು  ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು.   ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸ ಹೆಚ್ಚು ಮಾಡಲಿ ಎಂದರು.

ಸಮಾಜಕ್ಕೆ ಉಪಯುಕ್ತವಾಗುವ  ಸೆನ್ಸೇಷನ್ ಸುದ್ದಿಗಳನ್ನು ಮಾಡಿ:  ಪತ್ರಕರ್ತರು ಸದಾ ಸಮಾಜದ ಬಗ್ಗೆ ಚಿಂತಿಸುತ್ತಾರೆ.  ಸಮಾಜಕ್ಕೆ ಉಪಯುಕ್ತವಾಗುವ ಸೆನ್ಸೇಷನ್ ಸುದ್ದಿಗಳನ್ನು ಮಾಡಿ ಎಂದು ಕಿವಿಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net