ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮ

mnd Books
Published on

ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಆಗಸ್ಟ್ 29 ರಂದು ಬೆಳಗ್ಗೆ 11.00 ಗಂಟೆಗೆ ಆಯುಕ್ತರ ಕಚೇರಿ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣ ಇಂದಿರಾನಗರ, ಮೈಸೂರು ಇಲ್ಲಿ “ಕರ್ನಾಟಕದ ದೇವಾಲಯಗಳ ಕಲೆ ಮತ್ತು ವಾಸ್ತುಶಿಲ್ಪ” ಕುರಿತು ಮಾಸಿಕ ಸರಣಿ ವಿಶೇಷ ಉಪನ್ಯಾಸವನ್ನು ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಾದ ಡಾ. ಮನೋಜ್, ಇತಿಹಾಸ ತಜ್ಞರು, ಬೆಂಗಳೂರು ಅವರು ಉಪನ್ಯಾಸ ನೀಡಲಿದ್ದಾರೆ.

 ಉಪನ್ಯಾಸ ಕಾರ್ಯಕ್ರಮದಲ್ಲಿ ಆಸಕ್ತ ವಿದ್ಯಾರ್ಥಿಗಳು/ ಇತಿಹಾಸ ಆಸಕ್ತರು/ ಸಂಶೋಧಕರು ಹಾಗೂ ಸಾರ್ವಜನಿಕರು ಉಚಿತವಾಗಿ ಭಾಗವಹಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರ ಕಚೇರಿ ದೂ.ಸಂ:0821-2424671 ನ್ನು ಕಚೇರಿ (ಬೆಳಗ್ಗೆ 10 ರಿಂ ಸಂಜೆ 5.30 ಗಂಟೆ) ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರು(ಪರಂಪರೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net