

ಬೆಂಗಳೂರು: ಕಾರ್ಮಿಕ ಇಲಾಖೆಯ ವಿವಿಧ ವಿಭಾಗಗಳನ್ನು ಒಂದೇ ಸೂರಿನಡಿ ತರಲು ಈಗಾಗಲೇ ಮುಂದಾಗಿರುವ ಸಚಿವ ಶಿವರಾಂ ಹೆಬ್ಬಾರ್, ತ್ವರಿತಗತಿಯಲ್ಲಿ ಕಾರ್ಯರೂಪಕ್ಕೆ ತರುವಂತೆ ಅಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡ ವೇಳೆ ಇಲಾಖೆಯ ಅೀನದ ಕಚೇರಿಗಳು ಬೇರೆ ಕಡೆಗಳಲ್ಲಿ ಇರುವ ಕಾರಣ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ, ಈ ಸಮಸ್ಯೆಗಳನ್ನು ಹೋಗಲಾಡಿಸಲು ಹಾಗೂ ಇಲಾಖೆ ಕಾರ್ಯವೈಖರಿಗೆ ವೇಗ ನೀಡಲು ಎಲ್ಲ ಕಚೇರಿಗಳನ್ನು ಒಂದೆಡೆ ತರುವಂತೆ ಅಕಾರಿಗಳಿಗೆ ಸೂಚಿಸಲಾಗಿದೆ.
ನ್ಯಾಯಾಲಯಗಳಲ್ಲಿ ಅನೇಕ ವರ್ಷಗಳಿಂದ ಪ್ರಕರಣಗಳು ನಡೆಯುವುದರಿಂದ ಏನು ಲಾಭವಿಲ್ಲ. ಕಾರ್ಮಿಕರ ಸುರಕ್ಷತೆ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಹೊರಗೆ ಪ್ರಕರಣಗಳನ್ನು ಪರಿಹರಿಸಿಕೊಳ್ಳಲು ಆದ್ಯತೆ ನೀಡಬೇಕು. ಖಾಲಿ ಇರುವ ಹುದ್ದೆಗಳ ಭರ್ತಿಗೂ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅಕಾರಿಗಳಿಗೆ ತಾಕೀತು ಮಾಡಿದರು.
ಸುರಕ್ಷತೆಗೆ ಹೆಚ್ಚಿನ ಒತ್ತು: ವಿವಿಧ ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಉನ್ನತ ಅಕಾರಿಗಳೂ ಸಹ ಖುದ್ದು ಭೇಟಿ ನೀಡಬೇಕು. ಈ ಸಂಬಂಧ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ವರದಿ ಸಲ್ಲಿಸಬೇಕು. ಇಲಾಖೆಯ ಕಚೇರಿಗಳನ್ನು ಮರು ವಿಂಗಡಿಸುವಂತೆ ಹೇಳಿದ ಸಚಿವರು, ಅನುದಾನ ಮೊತ್ತವನ್ನು ಸೂಕ್ತ ಅವಯಲ್ಲಿ ವಿನಿಯೋಗಿಸುವ ಮೂಲಕ ಕಲ್ಯಾಣ ಕಾರ್ಯಕ್ರಮಗಳಿಗೆ ಚುರುಕು ನೀಡಬೇಕು ಎಂದು ಸಚಿವರು ಹೇಳಿದರು.
ತ್ವರಿತ ಪೂರ್ಣಗೊಳಿಸಿ: ರಾಜ್ಯದ ವಿವಿಧೆಡೆ ಇಲಾಖೆ ಕಚೇರಿಗಳಿಗಾಗಿ ನಿರ್ಮಿಸುತ್ತಿರುವ ಕಟ್ಟಡಗಳ ಕಾರ್ಯಪ್ರಗತಿ ಪರಿಶೀಲಿಸಿದ ಸಚಿವರು, ಅಗತ್ಯ ಅನುದಾನವೂ ಲಭ್ಯವಿದ್ದು, ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ತುಮಕೂರಿಗೆ ಬಳ್ಳಾರಿ ಕೇಂದ್ರ ಕಚೇರಿಯನ್ನಾಗಿಸಿರುವುದೂ ಸೇರಿ ಹಲವು ಬೆಳವಣಿಗೆಗಳು ಅಪ್ರಯೋಗಿಕವಾಗಿದ್ದು, ಇವುಗಳನ್ನು ಕೂಡಲೇ ಸರಿಪಡಿಸಬೇಕು. ಇಲಾಖೆಯನ್ನು ವಿಕೇಂದ್ರೀಕರಣ ಮಾಡುವ ಉದ್ದೇಶವೇ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬುದಾಗಿದೆ. ಆದರೆ, ಅಕಾರಿಗಳು ತಮ್ಮ ಅನುಕೂಲಕ್ಕಾಗಿ ಒಂದೆಡೆ ಕೂರಬಾರದು. ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಅಕಾರಿಗಳು ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವರು ತಿಳಿಸಿದರು.