ಒಳಮೀಸಲು ಜಾರಿಯಾಗದಿದ್ದಲ್ಲಿ ಹೋರಾಟಕ್ಕೂ ಸಿದ್ಧ

Aanjaneya
Published on

ಚಿತ್ರದುರ್ಗ: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗದಿದ್ದಲ್ಲಿ ಎಂದೂ ನಡೆಯದಂತ ಚಳವಳಿ ನಡೆಸಲು ಸಿದ್ಧ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಅವರು ಇನ್ನೆರಡು ತಿಂಗಳು ಕಾಲಾವಕಾಶ ಕೇಳಿದ್ದಾರೆ. ಒಳ ಮೀಸಲು ಜಾರಿಯಾಗುವವರೆಗೂ ಯಾವುದೇ ಉದ್ಯೋಗ ನೇಮಕಾತಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಇದಕ್ಕೆ ಲಕ್ಷಾಂತರ ಜನರನ್ನು ಒಗ್ಗೂಡಿಸಿ ಹೋರಾಡಿದ ಮಂದಕೃಷ್ಣ ಮಾದಿಗ ಕಾರಣರು. ಆ ಮಾದರಿ ಇಲ್ಲಿಯೂ ಅನುಸರಿಸಬೇಕಾಗುತ್ತದೆ. ಆದರೆ, ಕರ್ನಾಟಕ ಸರ್ಕಾರ ಅದಕ್ಕೆ ಆಸ್ಪದ ನೀಡದೆ, ಜಾರಿಗೊಳಿಸುವ ವಿಶ್ವಾಸವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net