

ಸರಗೂರು: ಸಿಕ್ಕ ಸಮಯವನ್ನು ವ್ಯರ್ಥ ಮಾಡದೆ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ವಕೀಲ ಎಂ. ಎನ್.ರವಿಶಂಕರ್ ಸಲಹೆ ನೀಡಿದರು.
ಪಪಂ ಸದಸ್ಯ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ರವಿ, ಚಿಕ್ಕವೀರನಾಯಕ ಮಾತನಾಡಿದರು. ಬಳಿಕ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಹಸೀನಾ ಬಾನು, ಪ್ರೀತು ಅವರನ್ನು ಸನ್ಮಾನಿಸಲಾಯಿತು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ 2021-2022 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳು ಪಾಲಕರ ಆಸೆಯನ್ನು ಈಡೇರಿಸುವತ್ತ ಗಮನಹರಿಸಬೇಕು. ಇದು ಸಾಧ್ಯವಾಗಬೇಕಾದರೆ ಓದಿನತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಸರಗೂರು ಶಿವಣ್ಣ , ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಪಪಂ ಸದಸ್ಯರಾದ ಎಸ್.ಎಲ್.ರಾಜಣ್ಣ, ಚೆಲುವಕೃಷ್ಣ, ಚೈತ್ರಾ ಸ್ವಾಮಿ, ದಿವ್ಯಾ ನವೀನ್, ಹೇಮಾವತಿ ರಮೇಶ್, ಪ್ರಾಂಶುಪಾಲ ಬಿ.ಸಿ.ಮಲ್ಲೇಶ್ ಇತರರಿದ್ದರು.