ಕಟ್ಟದ ಕಾರ್ಮಿಕರ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧಾರ / ಕೆ.ಮಹಾಂತೇಶ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ರಾಜ್ಯದಲ್ಲಿನ ನಿರ್ಮಾಣ ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಹಾಗೂ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿAದ ಸಿಗುವ ಸೌಲಭ್ಯಗಳನ್ನು ನೇರವಾಗಿ ಕಾರ್ಮಿಕರಿಗೆ ಸಿಗುವಂತೆ ಮಾಡಲು ಈ ಬಾರಿ ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡಲಿದೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಬಾರಿಯ ಬಿಜೆಪಿ ಪಕ್ಷವು ಕಟ್ಟಡ ಕಾರ್ಮಿಕರ ಹಣವನ್ನು ಇತರರೆ ಕೆಲಸಗಳಿಗೆ ಬಳಕೆ ಮಾಡಲಾಗಿತ್ತು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಕಟ್ಟಡ ಕಾರ್ಮಿಕರ ಹಿತ ಕಾಣುವುದಿಲ್ಲ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ದೇಶಾದ್ಯಂತ ಮತದಾರರಲ್ಲಿ ಗಣನೀಯ ಸಂಖ್ಯೆಯಲ್ಲಿ ಕಟ್ಟಡ ಕಾರ್ಮಿಕರು ಇದ್ದೇವೆ. ಈ ಲೋಕಸಭಾ ಚುನಾವಣೆಯಲ್ಲಿ ಸುಮಾರು ೫ ಕೋಟಿಗೂ ಹೆಚ್ಚು ಕಟ್ಟಡ ಕಾರ್ಮಿಕರು ಮತ್ತು ನಮ್ಮ ಕುಟುಂಬ ಸೇರಿ ಸುಮಾರು ೨೦ ಕೋಟಿಗೂ ಅಧಿಕ ಜನರು ಮತದಾನ ಮಾಡಲಿದ್ದು, ಕರ್ನಾಟಕದಲ್ಲಿ ಸುಮಾರು ೩೦ ಲಕ್ಷಕ್ಕೂ ಅಧಿಕ ನಿರ್ಮಾಣ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಮತಗಳನ್ನು ಚಲಾಯಿಸುವ ಅವಕಾಶ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಕಾರ್ಮಿಕ ಹಕ್ಕುಗಳನ್ನು ದಮನ ಮಾಡುವುದು, ಹಾಲಿ ಇರುವ ಕಾನೂನುಗಳನ್ನು ತೆಗೆದು ಹಾಕುವ ಪ್ರಯತ್ನಗಳನ್ನು ಈ ಅವಧಿಯಲ್ಲಿ ನಡೆಸಿದ್ದಾರೆ. ಇಂತಹ ಸನ್ನಿವೇಶದಲ್ಲೇ ಮತ್ತೆ ಅಧಿಕಾರಕ್ಕೆ ಮರಳಲು ಬಿಜೆಪಿ ಸಕಲ ಪ್ರಯತ್ನಗಳನ್ನು ನಡೆಸಿದೆ ಇದಕ್ಕೆ ಅವಕಾಶ ನೀಡಬಾರದು ಎಂದರು.

ದೇಶದಲ್ಲಿ ೨೦೧೬ ರಲ್ಲಿ ಮೋದಿ ಸರ್ಕಾರ ಜಾರಿಮಾಡಲಾದ ನೋಟು ರದ್ದತಿಯಿಂದಾಗಿ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡರು ಬಳಿಕ ಜಾರಿಗೊಳಿಸಿದ ಜಿ.ಎಸ್.ಟಿ ಪದ್ಧತಿಯೂ ನಿರ್ಮಾಣ ವಲಯದ ಎಲ್ಲ ಸಾಮಾಗ್ರಿಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಿ ನಿರ್ಮಾಣ ಕೆಲಸಗಳು ನಿಂತು ಹೋದವು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲ ಸದಸ್ಯರು ಮತ ಚಲಾಯಿಸಬೇಕೆಂದು ರಾಜ್ಯದ ಸಮಸ್ತ ಕಟ್ಟಡ ಕಾರ್ಮಿಕರು ನಿರ್ಧರಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್, ಕಾರ್ಯದರ್ಶಿ ಭೀಮರಾಜ್, ಖಜಾಂಚಿ ಆಶಾ, ಮುಖಂಡರಾದ ವಿಜಯಕೃಷ್ಣ, ಗುರಪ್ಪ ಇದ್ದರು.

ಚಿತ್ರ ೧೧ ಕೆ.ಎಲ್.ಆರ್. ೦೨ : ಕಟ್ಟಡ ಕಾರ್ಮಿಕರ ಫೆಡರೇಷನ್ ನಿಂದ ಲೋಕಸಭಾ ಚುನಾವಣೆ ಪ್ರಯುಕ್ತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಮಿಕರ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್, ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ, ಕಾರ್ಯದರ್ಶಿ ಭೀಮರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net