ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ

6Rayabag3
Published on

ರಾಯಬಾಗ: ಏಕಾಗ್ರತೆ, ಕಠಿಣ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯ ಎಂದು ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈರಗೌಡ ಪಾಟೀಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಬಾವನಸೌವದತ್ತಿಯ ಬಾಜಿರಾವ ಮಗದುಮ್ ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ, ಬೀಳ್ಕೊಡುಗೆ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಕನ್ನಡ ಅಧ್ಯಾಪಕ ಎ.ಎಸ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಆಚಾರ, ವಿಚಾರ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.

ಸಂಸ್ಥೆಯ ಉಪಾಧ್ಯಕ್ಷ ಜೆ.ಎಂ.ಮಗದುಮ್, ಅಜಿತ ಕಾಮಗೌಡ, ಬಾಬು ಜನಾಜ, ಕುಮಾರ ಕಾಮಗೌಡ, ಅರಿಹಂತ ಕಾಮಗೌಡ, ಆರ್.ಎನ್.ಪಾಟೀಲ, ಧೂಳಗೌಡ ಪಾಟೀಲ, ಬಿ.ಎಸ್.ಪಾಟೀಲ, ಎ.ಕೆ.ಸಲಗರೆ, ಮೇಘಾ ಹಿರೇಕುಡಿ, ಸಾವಿತ್ರಿ ಗಂಗಾಯಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net