ಕಣ್ಣಿಗೆ ಹಬ್ಬ ಮಲ್ಲಳ್ಳಿ ಜಲಪಾತ

ಸೋಮವಾರಪೇಟೆ ಸಮೀಪದ ಮಲ್ಲಳ್ಳಿ ಜಲಪಾತ ಭೋರ್ಗರೆಯುತ್ತಿರುವುದು.
ಸೋಮವಾರಪೇಟೆ ಸಮೀಪದ ಮಲ್ಲಳ್ಳಿ ಜಲಪಾತ ಭೋರ್ಗರೆಯುತ್ತಿರುವುದು.
Published on

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇಲ್ಲಿನ ನೈಸರ್ಗಿಕ ಮಲ್ಲಳ್ಳಿ ಜಲಪಾತ ಭೋರ್ಗರೆಯುತ್ತ ಧುಮ್ಮಿಕ್ಕುತ್ತಿದೆ.

ನ್ಯೆಸರ್ಗಿಕ ಜಲಧಾರೆ ಮಲ್ಲಳ್ಳಿ ಜಲಪಾತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಪುಷ್ಪಗಿರಿ ತಪ್ಪಲಿನಲ್ಲಿ ಹುಟ್ಟುವ ಕುಮಾರಧಾರಾ ನದಿ ಮಲ್ಲಳ್ಳಿ ಗ್ರಾಮದ ಕಲ್ಲು ಬಂಡೆಯಿಂದ 390 ಅಡಿ ಎತ್ತರದಿಂದ ಧುಮುಕಿ ಜಲಧಾರೆಯಾಗಿ ಧುಮ್ಮಿಕ್ಕುತ್ತದೆ. ಮೊದಲ ಹಂತದ 200 ಅಡಿ ಎತ್ತರದಿಂದ ಕೆಳಕ್ಕೆ ಧುಮುಕಿ ನಂತರ 90 ಅಡಿ ಎತ್ತರದಿಂದ ಕೆಳಕ್ಕೆ ಬೀಳುತ್ತದೆ. ಹೀಗೆ ಹಂತ ಹಂತವಾಗಿ ಒಟ್ಟಾಗಿ ಸುಮಾರು 390 ಅಡಿ ಎತ್ತರದಿಂದ ನೀರು ಬೀಳುವ ಸದ್ದು ಪ್ರವಾಸಿಗರನ್ನು ಆಕರ್ಷಿಸುತ್ತದೆ. ಮುಂದೆ ಹರಿದು ಕುಕ್ಕೆ ಸುಬ್ರಮಣ್ಯ ದೇವಾಲಯದ ಸ್ನಾನಘಟ್ಟ ತಲುಪುತ್ತದೆ.

ತಲುಪುವ ಮಾರ್ಗ:ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಗ್ರಾಮದಲ್ಲಿ ಮಲ್ಲಳ್ಳಿ ಜಲಪಾತವಿದೆ. ಸೋಮವಾರಪೇಟೆಯಿಂದ ಕೇವಲ 25ಕಿ.ಮೀ ಕ್ರಮಿಸಿದರೆ, ಜಲಪಾತ ದರ್ಶನವಾಗುತ್ತದೆ. ಸೋಮವಾರಪೇಟೆಯಿಂದ, ಯಡೂರು, ಶಾಂತಳ್ಳಿ, ಕುಮಾರಳ್ಳಿ ಮೂಲಕ 20ಕಿ.ಮೀ. ಕ್ರಮಿಸಿ, ಹಂಚಿನಳ್ಳಿ ಗ್ರಾಮವನ್ನು ತಲುಪಿ, ಎಡಕ್ಕೆ ತಿರುಗಿ 4 ಕಿ.ಮೀ. ತೆರಳಿದರೆ ಮಲ್ಲಳ್ಳಿ ಜಲಪಾತದ ದರ್ಶನವಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net