ಕಣ್ಣಿನ ಉಚಿತ ತಪಾಸಣಾ ಶಿಬಿರ

Eye Health
Published on

ರೋಟರಿ ಜಯಪ್ರಕಾಶ್ ನಗರ, ಕೃಷ್ಣರಾಜ ರೋಟರಿ, ಜೆ.ಪಿ.ನಗರ ಸ್ಪೋರ್ಟ್ಸ್ ಕ್ಲಬ್, ಸ್ನೇಹನಿಧಿ ಪತ್ತಿನ ಸಹಕಾರ ಸಂಘಗಳ ಸಹಯೋಗದಲ್ಲಿ ಅ.26ಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12ರವರೆಗೆ ಜೆ.ಪಿ.ನಗರ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ರೋಟರಿ ಅಧ್ಯಕ್ಷ ರವಿಶಂಕರ್ ತಿಳಿಸಿದರು.

ಚಾಮುಂಡಿಪುರಂ, ರಮಾಬಾಯಿ ನಗರ, ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನತೆಗೆ ಇದರಿಂದ ಪ್ರಯೋಜನವಾಗಲಿದೆ. ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯವಿರುವವರನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ಕೊಡಿಸಲಾಗುವುದು. ಸುಮಾರು 200 ಜನರು ಇದರ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಚಲುವಯ್ಯ, ಡಾ.ನಾಗರಾಜ್, ಚಂದ್ರ, ಜೆ.ವೆಂಕಟೆಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net