ಕಣ್ಮನ ಸೆಳೆಯುವ ಸಿರಿಮನೆ ಜಲಪಾತ

25sri-1 falls
ಸತತ ಮಳೆಯಿಂದಾಗಿ ಕಣ್ಮನ ಸೆಳೆಯುತ್ತಿರುವ ಸಿರಿಮನೆ ಜಲಪಾತ.
Published on

ಶೃಂಗೇರಿ: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ಬೆಳಗ್ಗೆಯಿಂದ ಸತತವಾಗಿ ಸುರಿದಿದ್ದು 102.2 ಮೀ.ಮೀ. ಮಳೆಯಾಗಿದೆ. ಪಟ್ಟಣದಲ್ಲಿ ಜನಸಂಚಾರ ಇಲ್ಲದಿದ್ದರೂ ಸದ್ಯದಲ್ಲೇ ಮಕ್ಕಳಿಗೆ ಶಾಲೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಜನರು ಭೇಟಿ ನೀಡುತ್ತಿದ್ದಾರೆ. ಹಳ್ಳಕೊಳ್ಳ ಹಾಗೂ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಮೇ ತಿಂಗಳಲ್ಲೇ ಉತ್ತಮ ಮಳೆ ಆಗುತ್ತಿರುವುದರಿಂದ ಕೃಷಿ ಕಾರ್ಯ ಪ್ರಾರಂಭವಾಗಬೇಕಿದೆ. ತಾಲೂಕಿನ ಹಲವೆಡೆ ಮರಗಳು ಧರೆಗೆ ಉರುಳಿದ್ದು ವಿದ್ಯುತ್ ವ್ಯತ್ಯಯದಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗಿ ಗ್ರಾಮೀಣ ಜನರು ಪರದಾಡುವಂತಾಗಿದೆ. ಹೊಳೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ್ದರಿಂದ ತಾಲೂಕಿನ ಸಿರಿಮನೆ ಜಲಪಾತ ಕಣ್ಮನ ಸೆಳೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net