ಕನಿಷ್ಠ ಬೆಂಬಲ ಬೆಲೆಯಿಂದ ಲಾಭವಿಲ್ಲ: ಬಡಗಲಪುರ ನಾಗೇಂದ್ರ

Badagalapura Nagendra
????????????????????????????????????
Published on

ಮೈಸೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ ಕೇವಲ ವಾಡಿಕೆ ಕ್ರಮವಾಗಿದ್ದು, ಇದರಿಂದ ರೈತರಿಗೆ ಯಾವುದೇ ಲಾಭವಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ರಸಗೊಬ್ಬರ, ಕೀಟನಾಶಕಗಳ ಬೆಲೆ ದುಬಾರಿಯಾಗಿದೆ. ಕೃಷಿ ಪರಿಕರಗಳ ಬೆಲೆಯೂ ಕೈಗೆಟುಕದಂತಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದ್ದು, ಸಾಗಣೆ ವೆಚ್ಚ ದುಬಾರಿ ಆಗಿದೆ. ಒಂದು ಅಂದಾಜಿನ ಪ್ರಕಾರ ಕೃಷಿ ಉತ್ಪನ್ನಗಳ ವೆಚ್ಚ ಶೇ.20ರಿಂದ 47ರಷ್ಟು ಹೆಚ್ಚಾಗಿದೆ. ಆದರೆ ಕೇಂದ್ರ ಸರ್ಕಾರ ಶೇ.5ರಿಂದ 10ರಷ್ಟು ಮಾತ್ರ ಬೆಲೆ ಏರಿಕೆ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಡಾ.ಸ್ವಾಮಿನಾಥನ್ ವರದಿ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದರೆ ರೈತರಿಗೆ ಸ್ವಲ್ಪ ಲಾಭವಾಗಲಿದೆ. ಕೇಂದ್ರ ಸರ್ಕಾರ ಈಗ ಮಾಡಿರುವ ಘೋಷಣೆಯಿಂದ ಹೆಚ್ಚಿನ ಪ್ರಯೋಜನ ಇಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net