ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ

05 Raju 4
Published on

ಕೊಳ್ಳೇಗಾಲ: ಕನ್ನಡಿಗರಾದ ನಾವು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಚ್.ಕೆ. ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ತಿಳಿಸಿದರು.

ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಎಚ್.ಕೆ.ಟ್ರಸ್ಟ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಅಮೃತ ವರ್ಷಕ್ಕೆ ಬೆಳ್ಳಿಯ ಸ್ಪರ್ಶ ಸಾಹಿತ್ಯದ ನಡಿಗೆ ಶಾಲಾ, ಕಾಲೇಜುಗಳ ಕಡೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪ್ರತಿಯೊಬ್ಬರೂ ಕನ್ನಡವನ್ನು ಗೌರವಿಸಬೇಕು. ಎಲ್ಲ ರಂಗದಲ್ಲೂ ಸ್ಪರ್ಧೆ ಮಾಡಿ ಕನ್ನಡಿಗರ ಅನಿವಾರ್ಯತೆಯನ್ನು ದೇಶದಲ್ಲಿ ಸೃಷ್ಟಿಸಬೇಕಿದೆ. ಇವೆಲ್ಲವೂ ಸಾಧ್ಯವಾಗಬೇಕಾದರೆ ಚೆನ್ನಾಗಿ ಓದಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ನಾಗರಾಜು, ಕಾರ್ಯದರ್ಶಿ ಚಿಕ್ಕರಾಜು, ನಾಗರಾಜು .ಸಿ, ವಿದ್ಯಾಸಂಸ್ಥೆ ಸಂಯೋಜಕ ರಾಜೇಶ್, ಜಗದೀರ್ಶ, ಆರ್.ರವೀಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net