ಕನ್ನಡ ಸೇವೆ ಮಾಡಿದವರ ಸ್ಮರಿಸುವ ಅಗತ್ಯವಿದೆ

Kannada Rajyotsava
Published on

ಪ್ರತಿಯೊಬ್ಬರೂ ಕನ್ನಡ ಸೇವೆ ಮಾಡಬೇಕು ಹಾಗೂ ಏಕೀಕರಣಕ್ಕೆ ಶ್ರಮಿಸಿದ ಸಾಹಿತಿಗಳು, ಹೋರಾಟಗಾರರನ್ನು ಸ್ಮರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಕರೆ ನೀಡಿದರು.

ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕವು ಜೆಎಲ್‌ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾದಲ್ಲಿ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ, ‘ಕನ್ನಡವೇ ಸತ್ಯ’- ಡಾ.ರಾಜ್ ಕುಮಾರ್ ಅವರು ಹಾಡಿರುವ ಭಾವಗೀತೆಗಳ ಗಾಯನ. ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡ ಮಾತನಾಡುವ ಜನರೆಲ್ಲಾ ಒಗ್ಗೂಡಬೇಕು ಎಂದು ಏಕೀಕರಣ ಚಳವಳಿ ನಡೆಸಲಾಯಿತು. ಏಕೀಕರಣವಾದ ನಂತರವೂ ಬೆಂಗಳೂರಿನಲ್ಲಿ ಕನ್ನಡದ ಬಗ್ಗೆ ನಿರ್ಲಕ್ಷೃ ತೋರಿಸಲಾಗುತ್ತಿತ್ತು. ಆದರೆ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಹೋರಾಟಗಾರರು ನಡೆಸಿದ ಹೋರಾಟದಿಂದಾಗಿ ಕನ್ನಡ ಇವತ್ತು ಉಳಿದು, ವಿಶ್ವಮಟ್ಟಕ್ಕೆ ಬೆಳೆದು ಬಂದಿದೆ ಎಂದು ಶ್ಲಾಘಿಸಿದರು.

ಸುಗಮ ಸಂಗೀತ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ವಿ.ಬೈರಿ ಮಾತನಾಡಿ, ಹತ್ತು ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದ ಜಿಲ್ಲಾ ಘಟಕ ಹತ್ತು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಸಂಘಟಿಸಿದೆ. ಮುಂದಿನ ಫೆಬ್ರವರಿಯಲ್ಲಿ ರಾಜ್ಯಮಟ್ಟದ ಸಮ್ಮೇಳನ ನಡೆಸಲು ಉದ್ದೇಶಿಸಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net