ಕನ್ನಡ ಹಬ್ಬವನ್ನು ಪ್ರತಿಯೊಬ್ಬರೂ ಆಚರಿಸಿ

17HDK3
ಎಚ್.ಡಿ.ಕೋಟೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿದರು. ಮಡ್ಡಿಕೆರೆ ಗೋಪಾಲ್, ಕನ್ನಡ ಪ್ರಮೋದ್, ವೈ.ಡಿ.ರಾಜಣ್ಣ, ಚಂದ್ರಶೇಖರ್, ಅನಿತಾ ನಿಂಗನಾಯಕ, ನವೀನ್ ಗೌಡ ಇದ್ದರು.
Published on

ಎಚ್.ಡಿ.ಕೋಟೆ: ಕನ್ನಡ ಹಬ್ಬವನ್ನು ಪ್ರತಿಯೊಬ್ಬರೂ ಮನೆ ಮನೆಯಲ್ಲೂ ಆಚರಿಸುವ ಮೂಲಕ ಭಾಷೆಯ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಳ್ಳಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಸಲಹೆ ನೀಡಿದರು.


ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ತಾಲೂಕು ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡಿನ ಪ್ರತಿಯೊಬ್ಬರೂ ಕನ್ನಡ ಜಲ, ನೆಲ, ಭಾಷೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡು ಕನ್ನಡದ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕು. ತಾಲೂಕು ಕೇರಳ ಗಡಿಭಾಗವಾಗಿದ್ದು ಗಡಿ ಭಾಗದ ಜನರಿಗೆ ನಾವು ಜತೆಯಲ್ಲಿದ್ದೇವೆ ಎಂಬ ಭರವಸೆ ನೀಡಬೇಕಾಗಿದೆ ಎಂದರು.


ಕಳೆದ ವರ್ಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬಾವಲಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು, ಮುಂದಿನ ವರ್ಷ ಜನವರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮ್ಮೇಳನವನ್ನು ಗಡಿ ಭಾಗದ ಅಂತರಸಂತೆ ಗ್ರಾಮದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದರು.


ಮಹಾರಾಷ್ಟ್ರ ಗಡಿಭಾಗದಲ್ಲಿ ಮರಾಠಿಗರ ಪುಂಡಾಟಿಕೆ ಜಾಸ್ತಿಯಾಗಿದೆ. ಕನ್ನಡದವರು ಸ್ವಾಭಿಮಾನಿಗಳು, ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.


ಅಧ್ಯಕ್ಷತೆಯನ್ನು ಜಿಲ್ಲಾ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಮಾತನಾಡಿ, ವಿಶ್ವದಲ್ಲಿ ನಾಲ್ಕು ಅಣೆಕಟ್ಟುಗಳನ್ನು ಕಟ್ಟಿ ನಾಡಿನ ಜನತೆಗೆ ಜೀವಜಲವನ್ನು ಧಾರೆ ಎರೆದ ತಾಲೂಕು ಯಾವುದಾದರೂ ಇದ್ದರೆ ಅದು ಎಚ್.ಡಿ.ಕೋಟೆ ಮಾತ್ರ ಎಂದು ಬಣ್ಣಿಸಿದರು.


ಹೆಸರಿಗೆ ಮಾತ್ರ ಹಿಂದುಳಿದ ತಾಲೂಕು, ಆದರೆ ಅಪಾರ ಅರಣ್ಯ, ಜಲ ಸಂಪತ್ತನ್ನು ಹೊಂದಿದ ಸಂಪದ್ಭರಿತ ತಾಲೂಕು ಎಂದರು.


ತಾಲೂಕಿನ ವಿದ್ಯಾರ್ಥಿಗಳು ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಹಿಂದುಳಿದ ತಾಲೂಕಿನ ನೂರಕ್ಕೆ ತೊಂಬತ್ತರಷ್ಟು ಮಕ್ಕಳು ಪಡೆದಿದ್ದಾರೆ ಎಂದರೆ ಅದು ಹೆಮ್ಮೆಯ ವಿಚಾರ ಎಂದರು.


ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ತಾಲೂಕು ಕಸಾಪ ಅಧ್ಯಕ್ಷ ಕನ್ನಡ ಪ್ರಮೋದ್, ಪುರಸಭಾ ಅಧ್ಯಕ್ಷೆ ಅನಿತಾ ನಿಂಗನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಎಚ್.ಸಿ.ನರಸಿಂಹಮೂರ್ತಿ, ಸುಹಾಸಿನಿ, ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷರಾದ ವೈ. ಡಿ ರಾಜಣ್ಣ, ಚಂದ್ರಶೇಖರ್, ಎಂ ಶಶಿಧರ್, ನವೀನ್ ಗೌಡ ವೈ.ಎಲ್, ಛಾಯಾಗ್ರಾಹಕ ಸಂಘದ ಅಧ್ಯಕ್ಷ ಶಿವಣ್ಣ, ವರ್ತಕರ ಸಂಘದ ಅಧ್ಯಕ್ಷ ವಿನಯ್ ಭಜರಂಗಿ, ಜೈ ಭೀಮ್ ಆಟೋ ಚಾಲಕರ ಸಂಘದ ಅಧ್ಯಕ್ಷ ಚೆಲುವ ರಾಜು, ಮಹಾದೇವ ಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net