ಕನ್ನಡಿಗರ ಮೇಲೆ ದೌರ್ಜನ್ಯ ಸಹಿಸಲ್ಲ

Published on

ಬೆಳಗಾವಿ: ಪೊಲೀಸರು ಕನ್ನಡಿಗರ ಮೇಲೆ ದೌರ್ಜನ್ಯ ಮಾಡುವುದು ಸರಿ ಅಲ್ಲ. ಅದನ್ನು ಕರವೇ ಸಹಿಸುವುದಿಲ್ಲ, ಬೆಳಗಾವಿ ನಗರದಲ್ಲಿ ಪೊಲೀಸರನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಹುನ್ನಾರ ನಡೆಸಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಗಂಭೀರ ಆರೋಪಿಸಿದ್ದಾರೆ.

ಹಿರೇಬಾಗೇವಾಡಿ ಟೋಲ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರವೇ ಕಾರ್ಯಕರ್ತರನ್ನು ಬೆಳಗಾವಿ ಪ್ರವೇಶ ಮಾಡದಂತೆ ತಡೆ ಹಿಡಿದಿರುವ ಕುರಿತು ಗೃಹ ಸಚಿವ ಆರಗ ಾನೇಂದ್ರ ಅವರೊಂದಿಗೆ ಚರ್ಚಿಸುವೆ ಎಂದರು. ಖಾಸಗಿ ಕಾಲೇಜಿನಲ್ಲಿ ಕನ್ನಡ ಭಾವುಟ ಹಿಡಿದ ವಿದ್ಯಾರ್ಥಿ ಮೇಲೆ ಎಂಇಇಎಸ್​ ಪುಂಡರಿಂದ ಹಲ್ಲೆ ನಡೆದಿರುವುದು ಹಾಗೂ ಕ್ರಮ ಜರುಗಿಸಬೇಕಿದ್ದ ಪೊಲೀಸರೂ ಆತನ ಮೇಲೆ ಹಲ್ಲೆ
ನಡೆಸಿ, ಕನ್ನಡ ಭಾವುಟದ ಬಗ್ಗೆ ಪೊಲೀಸರು ಅಗೌರವದಿಂದ ಅವಹೇಳನಕಾರಿ ಪದ ಬಳಕೆ ಮಾಡಿರುವುದು ತಪ್ಪು. ಈ ಕುರಿತು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕಕುಮಾರ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಕರವೇ ಜಿಲ್ಲಾಧ್ಯ ದೀಪಕ ಗುಡಗನಟ್ಟಿ ಮಾತನಾಡಿ, ಮಹಾರಾಷ್ಟ್ರದ ಉಪಟಳಕ್ಕೆ ಪಾಠ ಕಲಿಸಲು ಸಾವಿರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸುವ ಸಂದರ್ಭದಲ್ಲಿ ಪೊಲೀಸರು ತಡೆಯುವ ಮೂಲಕ ಕನ್ನಡಿಗರ ಭಾವನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗಣೇಶ ರೋಕಡೆ, ರುದ್ರಗೌಡ ಪಾಟೀಲ, ಮಹೇಶ ಹಟ್ಟಿಹೊಳಿ, ರಮೇಶ ತಳವಾರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

ಎಂಇಎಸ್​ನಿಂದ ನಾಡವಿರೋಧಿ ೂಷಣೆ: ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಬಾರದ ಕಾರಣಕ್ಕೆ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ೂಷಣೆ ಕೂಗಿದ ಎಂಇಎಸ್​ ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಶಕ್ಕೆ ಪಡೆದರು. ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯವಾಗುತ್ತಿದೆ. ನಮಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರನ್ನು ಬೆಳಗಾವಿಗೆ ಬಾರದಂತೆ ನೋಡಿಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಂಗಳವಾರ ದಿನವೀಡಿ ನಗರ ಸೇರಿದಂತೆ ಜಿಲ್ಲೆಯ ಗಡಿಭಾಗದಲ್ಲಿ ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿತ್ತು. ನಗರದಲ್ಲಿ ಕನ್ನಡಪರ ಸಂಟನೆಗಳು ಹಾಗೂ ಎಂಇಎಸ್​ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ 2 ಡಿಎಸ್​ಪಿ, 4 ಸಿಪಿಐ, 10 ಪಿಎಸ್​ಐ ನೇತೃತ್ವದಲ್ಲಿ 12 ಕೆಎಸ್​ಆರ್​ಪಿ ಹಾಗೂ 8 ಸಿಎಆರ್​ ತುಕಡಿ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.

ಶಿವಸೇನೆ ಕಾರ್ಯಕರ್ತರು ಪೊಲೀಸ್​ ವಶಕ್ಕೆ: ನಿಪ್ಪಾಣಿ ತಾಲೂಕಿನ ಕೊಗನೊಳಿ ಟೋಲ್​ ನಾಕಾ ಬಳಿ ಮಂಗಳವಾರ ಪ್ರತಿಭಟನೆಗೆ ಮುಂದಾದ ಶಿವಸೇನೆ ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಗಡಿಭಾಗದ ರಾಷ್ಟ್ರೀಯ ಹೆದ್ದಾರಿ&4ರ ಕೊಗನೊಳಿ ಟೋಲ್​ ನಾಕಾ ಬಳಿ ಉದ್ಧವ ಠಾಕ್ರೆ ಶಿವಸೇನೆ ಬಣದ ಕೊಲ್ಲಾಪುರ ಜಿಲ್ಲಾಧ್ಯ ವಿಜಯ ದೇವಣೆ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು. ಕಾರ್ಯಕರ್ತರು ಮಹಾರಾಷ್ಟ್ರ ಸರ್ಕಾರ, ಸಚಿವರ ವಿರುದ್ಧ ಹರಿಹಾಯ್ದರು. ಚೆಕ್​ಪೋಸ್ಟ್​ ಬಳಿ ಕರ್ನಾಟಕದ 5 ಡಿಆರ್​ ತುಕಡಿ, ಒಬ್ಬರು ಎಸ್ಪಿ, ಒಬ್ಬರು ಹೆಚ್ಚುವರಿ ಎಸ್ಪಿ, 3 ಜನ ಡಿವೈಎಸ್​ಪಿ, 8 ಜನ ಪಿಐ, 30 ಪಿಎಸ್​ಐ, ಒಳಗೊಂಡು 450 ಪೊಲೀಸ್​ ಸಿಬ್ಬಂದಿ ನಿಯೋಜಿಸಲಾಗಿತ್ತು. ಚಿಕ್ಕೋಡಿ ಉಪವಿಭಾಗದಲ್ಲಿನ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ 20 ಮಾರ್ಗಗಳಲ್ಲೂ ಪೊಲೀಸ್​ ನಾಕಾಬಂಧಿ ಹಾಕಲಾಗಿತ್ತು. ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ಎಲ್ಲ ಒಳಮಾರ್ಗಗಳಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಕೆಲವೆಡೆ ಉಭಯ ರಾಜ್ಯಗಳ ಪ್ರಯಾಣಿಕರು ಪರದಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net