ಕನ್ನಡಿಗರು ಹೃದಯ ಶ್ರೀಮಂತರು

30 nrp 5. kanndada
ಎನ್.ಆರ್.ಪುರ ತಾಲೂಕು ಬಿ.ಎಚ್.ಕೈಮರದ ಜೈ ಕರ್ನಾಟಕ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಿದರು. ರೀನಾಬೆನ್ನಿ, ನಾಗರತ್ನಾ, ಪಿ.ಜೆ.ಆ್ಯಂಟೋನಿ, ಪಿ.ಆರ್.ಸದಾಶಿವ, ದಿವಾಕರ್ ಭಟ್,ಎಚ್.ಆರ್.ಜಗದೀಶ್, ಎಚ್.ಎ.ನವೀನ್, ಪ್ರೇಮಾ ಶ್ರೀನಿವಾಸ್, ಜಯಂತಿ ಇದ್ದರು.
Published on

ಎನ್.ಆರ್.ಪುರ: ಕನ್ನಡಿಗರು ಹೃದಯ ಶ್ರೀಮಂತಿಕೆ ಹೊಂದಿರುವವರು. ಹೀಗಾಗಿ ಹೊರ ರಾಜ್ಯದಿಂದ ಬಂದ ಎಲ್ಲ ಭಾಷೆೆಯ ಜನರಿಗೂ ಆಶ್ರಯ ನೀಡಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಇಲ್ಲಿನ ಜೈ ಕರ್ನಾಟಕ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಆಯೋಜಿಸಿದ್ದ 8ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಯಾವುದೇ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದ್ದರೂ ಅವರು ಕನ್ನಡ ಕಲಿತು, ಉಳಿಸಿ ಬೆಳೆಸುವ ಪ್ರಯತ್ನ ಮಾಡಬೇಕು. ಕನ್ನಡ ಶ್ರೀಮಂತ ಭಾಷೆೆಯಾಗಿದ್ದು ಅನೇಕ ಸಾಹಿತಿಗಳು, ಕವಿಗಳು ಸುಮಧುರ ಸಾಹಿತ್ಯದ ಮೂಲಕ ರಾಜ್ಯದ ಗಮನ ಸೆಳೆಯುವಂತೆ ಮಾಡಿದ್ದಾರೆ. 8 ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ಲಭಿಸಿರುವುದು ಹೆಮ್ಮೆಯ ಸಂಗತಿ. ಆಟೋ ಚಾಲಕರ ಮನವಿಯಂತೆ ಮುಂದಿನ ರಾಜ್ಯೋತ್ಸವದೊಳಗೆ ಸರ್ಕಲ್‌ನಲ್ಲಿ ಹೈಮಾಸ್ಟ್ ದೀಪ ಅಳವಡಿಸಲಾಗುವುದು ಹಾಗೂ ವಿಶ್ರಾಂತಿ ಕೊಠಡಿ ನಿರ್ಮಿಸಲು ಶ್ರಮಿಸಲಾಗುವುದು ಎಂದರು.

ಜಿಪಂ ಮಾಜಿ ಸದಸ್ಯ ಪಿ.ಆರ್.ಸದಾಶಿವ ಮಾತನಾಡಿ, ಕರ್ನಾಟಕದಲ್ಲಿ ಹುಟ್ಟಿದ ಎಲ್ಲರೂ ಪುಣ್ಯವಂತರು. ಶಾಂತಿ, ನೆಮ್ಮದಿಯಿಂದ ಅಣ್ಣ-ತಮ್ಮಂದಿರಂತೆ ಎಲ್ಲರೂ ಬದುಕುತ್ತಿರುವುದು ದೇಶಕ್ಕೆ ಮಾದರಿ ಎಂದರು.

ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಶೃಂಗೇರಿ ಕ್ಷೇತ್ರ ಅಧ್ಯಕ್ಷ ಎಚ್.ಆರ್.ಜಗದೀಶ್ ಮಾತನಾಡಿ, ಆಟೋ ಚಾಲಕರು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪ್ರಯಾಣಿಕರು ಬಿಟ್ಟು ಹೋದ ಅಮೂಲ್ಯ ವಸ್ತುಗಳನ್ನು ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತಿದ್ದಾರೆ ಎಂದರು.

ಜೈ ಕರ್ನಾಟಕ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಚ್.ಎ.ನವೀನ್, ನಾಗಲಾಪುರ ಗ್ರಾಪಂ ಅಧ್ಯಕ್ಷೆ ರೀನಾಬೆನ್ನಿ, ಗುಬ್ಬಿಗಾ ಗ್ರಾಪಂ ಅಧ್ಯಕ್ಷೆ ನಾಗರತ್ನಾ, ಜೆಡಿಎಸ್ ಕ್ಷೇತ್ರಾಧ್ಯಕ್ಷ ದಿವಾಕರ್ ಭಟ್, ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಶ್ರೀನಿವಾಸ್, ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಜಯಂತಿ, ವರ್ತಕರ ಸಂಘದ ಅಧ್ಯಕ್ಷ ಬಿ.ವಿ.ದೀಪಕ್, ಕುದುರೆಗುಂಡಿ ಆಟೋ ಚಾಲಕರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಬಾಳೆಹೊನ್ನೂರು ಆಟೊ ಚಾಲಕರ ಸಂಘದ ಅಧ್ಯಕ್ಷ ಸಂದೇಶ್, ಅಭಿನವ ಗಿರಿರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net