ಕಾರ್ಖಾನೆಗಳ ಸಹಾಯಕ ನಿರ್ದೇಶಕನಿಗೆ 4 ವರ್ಷ ಜೈಲು

mng--3 Dec H suresh
Published on

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಪ್ರಕರಣ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಕಾರ್ಖಾನೆಗಳ ಸಹಾಯಕ ನಿರ್ದೇಶಕ ಎಚ್.ಸುರೇಶ್‌ಗೆ 4 ವರ್ಷಗಳ ಸಾದಾ ಸಜೆ ಹಾಗೂ 4 ಲ.ರೂ. ದಂಡ, ಶಿಕ್ಷೆ ವಿಧಿಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಮಂಗಳೂರಿನ ಕೊಟ್ಟಾರದಲ್ಲಿರುವ ಕಾರ್ಖಾನೆಗಳ ಸಹಾಯಕ ನಿರ್ದೇಶಕರ ಕಚೇರಿ ಉಪವಿಭಾಗ-2ರಲ್ಲಿ ಕಾರ್ಖಾನೆಗಳ ಸಹಾಯಕ ನಿರ್ದೇಶಕನಾಗಿದ್ದ ಸಂದರ್ಭ 2016ರ ನ.30ರಂದು ಪ್ರಕರಣ ದಾಖಲಾಗಿ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದ್ದರು. ಪ್ರಸ್ತುತ ಅವರು ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾರ್ಖಾನೆಗಳ ಪರವಾನಗಿ ನೀಡುವುದು, ಪರವಾನಗಿ ನವೀಕರಣ, ನಿರಾಕ್ಷೇಪಣಾ ಪತ್ರ ನೀಡುವುದು ಮೊದಲಾದ ಕೆಲಸಗಳನ್ನು ನಿರ್ವಹಿಸಲು ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆಯುತ್ತಿದ್ದ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಮಂಗಳೂರು ಪೊಲೀಸ್ ಠಾಣೆಯಲ್ಲಿ 2016ರ ನ.30ರಂದು ಪ್ರಕರಣ ದಾಖಲಾಗಿ ದಾಳಿ ನಡೆಸಲಾಗಿತ್ತು. ಆ ವೇಳೆ 3,49, 515 ರೂ. ಪತ್ತೆಯಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಡಿ.3ರಂದು ಆರೋಪಿ ಎಚ್.ಸುರೇಶ್‌ಗೆ 4 ವರ್ಷಗಳ ಸಾದಾ ಸಜೆ ಹಾಗೂ 4 ಲ.ರೂ. ದಂಡ, ಒಂದು ವೇಳೆ ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಎಸಿಬಿ ಮಂಗಳೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಯೋಗೀಶ್ ಕುಮಾರ್ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net