

ಹನಗೋಡು: ಹೋಬಳಿಯ ಕರಣಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹರೀಶ್ ಮಾವುಡು ಹಾಗೂ ಉಪಾಧ್ಯಕ್ಷರಾಗಿ ಮಂಜುಳಾ ಕುಮಾರನಾಯಕ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಸನ್ಮಾನಿಸಿ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು, ನೈರ್ಮಲ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಕೊಡಲು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುವ ಮೂಲಕ ಜನಪರ ಕೆಲಸ ಮಾಡುವಂತೆ ಸಲಹೆ ನೀಡಿದರು.
ಚುನಾವಣಾಧಿಕಾರಿಯಾಗಿ ಶಿಕ್ಷಣಾಧಿಕಾರಿ ಎಸ್.ರೇವಣ್ಣ ಕಾರ್ಯನಿರ್ವಹಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಹರೀನಹಳ್ಳಿ ಕುಮಾರಸ್ವಾಮಿ, ಕಣಗಾಲ್ ಮಲ್ಲೇಶ್, ಮಾದೇಗೌಡ, ಪ್ರೇಮ್‌ಕುಮಾರ್, ಕೆ.ಜೆ.ಮಾದೇಗೌಡ ಸೇರಿದಂತೆ ಇತರರು ಇದ್ದರು.