ಕರೊನಾ ಭಯಬೇಡ, ಎಚ್ಚರಿಕೆ ಇರಲಿ

02
Published on

ಎಚ್.ಡಿ.ಕೋಟೆ: ಕರೊನಾ ಬಗ್ಗೆ ಸಾರ್ವಜನಿಕರು ಭಯಪಡದೆ ಎಚ್ಚರಿಕೆಯಿಂದ ಇರಬೇಕು ಎಂದು ಶಾಸಕ ಸಿ. ಅನಿಲ್‌ಕುಮಾರ್ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಸೋಮವಾರ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ‘ಕೋವಿಡ್-19-ಭಯ ಬೇಡ ಎಚ್ಚರ ಇರಲಿ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಿ, ನಿರ್ಲಕ್ಷೃ ಮಾಡಬೇಡಿ ಎಂದು ಕಿವಿಮಾತು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್ ಮಾತನಾಡಿ, ಸರಗೂರು ಮತ್ತು ಎಚ್.ಡಿ.ಕೋಟೆ ತಾಲೂಕಿನಲ್ಲಿ ಇತೀಚೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಕರೊನಾ ಸೋಂಕು ಯಾರಿಂದ, ಯಾರಿಗೆ, ಯಾವ ರೀತಿ ಹರಡುತ್ತದೆ ಎಂದು ತಿಳಿಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇದ್ದರೆ ರೋಗವನ್ನು ತಡೆಯಲು ಸಾಧ್ಯ ಎಂದರು.

ತಹಸೀಲ್ದಾರ್ ಆರ್.ಮಂಜುನಾಥ್, ತಾ.ಪಂ. ಇಒ ರಾಮಲಿಂಗಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net