ಬೆಂಗಳೂರು
ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ. 1.62 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಶೇ.1 ಕ್ಕಿಂತ ಕೆಳಗಿಳಿಸುವ ಗುರಿ ಹೊಂದಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ದೊಡ್ಡದು. ನೀವೆಲ್ಲರು ಹಗಲಿರುಳು ಶ್ರಮಿಸಿದ ಕಾರಣ ಇಂದು ರಾಜ್ಯದಲ್ಲಿ ಕೊರೋನ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣವನ್ನು ಕೆಲವೇ ದಿನಗಳಲ್ಲಿ ಶೇ. 1 ಕ್ಕಿಂತ ಕೆಳಗಿಸುವ ಗುರಿ ಹೊಂದಿದ್ದೇವೆ ಎಂದರು.