ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ನೇಮಕ

Published on

ಗೋಣಿಕೊಪ್ಪಲು: ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಸಿ.ಎಸ್.ಅರುಣ್ ಮಾಚಯ್ಯ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರಾಗಿರುವ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಅರುಣ್ ಮಾಚಯ್ಯ ಅವರಿಗೆ ಹೆಚ್ಚಿನ ಜವಾಬ್ದಾರಿ ದೊರಕಿದೆ.

ಅಂತಾರಾಷ್ಟ್ರೀಯ ಕರಾಟೆಪಟುವೂ ಆಗಿರುವ ಸಿ.ಎಸ್.ಅರುಣ್ ಮಾಚಯ್ಯ ಅವರು ವಿಧಾನ ಪರಿಷತ್ ಮಾಜಿ ಸದಸ್ಯ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಅವಧಿಯಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲು ಜಿಲ್ಲಾ ಪಂಚಾಯಿತಿ ಅಧೀನದಲ್ಲಿ ಪೊನ್ನಂಪೇಟೆಯಲ್ಲಿ ಕಳೆದ ಎರಡು ದಶಕಗಳ ಹಿಂದೆ ಕ್ರೀಡಾ ವಸತಿ ನಿಲಯ ಸ್ಥಾಪಿಸಿ, ಹಲವು ಹಾಕಿ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ್ದಾರೆ.

ಅಖಿಲ ಭಾರತ ಶೀಟೋರಿಯೋ ಕರಾಟೆ ಯೂನಿಯನ್ ಅಧ್ಯಕ್ಷರು, ವಿಶ್ವ ಶೀಟೋರಿಯೋ ಕರಾಟೆ ಫೆಡರೇಷನ್ ನಿರ್ದೇಶಕರಾಗಿ, ದಕ್ಷಿಣ ಭಾರತ ಕರಾಟೆ ಫೆಡರೇಷನ ಅಧ್ಯಕ್ಷರಾಗಿ ಇವರು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net