ಕರ್ನಾಟಕ ರತ್ನ ನೀಡಿ ಗೌರವ ಹೆಚ್ಚಿಸಿಕೊಂಡ ಸರ್ಕಾರ

Vishnuvardhan Smaraka
Published on

ರಾಜ್ಯ ಸರ್ಕಾರ ಡಾ.ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡುವ ಮೂಲಕ ತನ್ನ ಗೌರವ ಹೆಚ್ಚಿಸಿಕೊಂಡಿದೆ ಎಂದರೆ ತಪ್ಪಾಗಲಾರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಭಿಪ್ರಾಯಪಟ್ಟರು.

ನಗರದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನದಲ್ಲಿ ವಿಷ್ಣುವರ್ಧನ್ ಅಭಿಮಾನಿ ಬಳಗ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಡಾ.ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರು.

ಕಲಾವಿದರಿಗೆ ಸಾವಿಲ್ಲ. ಇಡೀ ವಿಶ್ವ ಜೀವಂತವಾಗಿರುವವರೆಗೂ ಕಲಾವಿದರೂ ಜೀವಂತವಾಗಿರುತ್ತಾರೆ. ವಿಷ್ಣುವರ್ಧನ್ ಬಹುಶಃ ಇಂದಿಗೆ ಜೀವಂತವಾಗಿದ್ದರೆ ಅವರ ಅಭಿಮಾನಿಗಳ ಸಂಭ್ರಮಾಚರಣೆ ಹೇಳತೀರದು. ಆದರೆ, ನಮ್ಮೆಲ್ಲರ ದುರಾದೃಷ್ಟ, ಅವರು ಬಹುಬೇಗ ನಮ್ಮನ್ನೆಲ್ಲ ಅಗಲಿದ್ದು ನೋವಿನ ಸಂಗತಿ ಎಂದು ಬೇಸರಿಸಿದರು.

ಮೈಸೂರು ಭಾಗದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ಅದೊಂದು ಜನರ, ಅಭಿಮಾನಿಗಳ ಸ್ಮರಣೀಯ ಹಾಗೂ ಪ್ರೇಕ್ಷಣೀಯ ಸ್ಥಳವಾಗಿ ಬದಲಿಸಬೇಕು. ಈ ಮೂಲಕ ಸದಾ ಅವರನ್ನು ಸ್ಮರಿಸುವ ಕೆಲಸವಾಗಬೇಕು. ಅವರು 250ಕ್ಕೂ ಹೆಚ್ಚಿನ ಚಲನಚಿತ್ರಗಳಲ್ಲಿ ನಟಿಸಿದ್ದು, ಆದರ್ಶದ ಚಲಚಿತ್ರಗಳನ್ನು ಸಮಾಜಕ್ಕೆ ನೀಡಿದ್ದಾರೆ. ಇದರಿಂದ ಯುವಕರು ಸ್ಫೂರ್ತಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ಒಕ್ಕೂಟದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ, ವಿಷ್ಣುವರ್ಧನ್ ಅಭಿಮಾನಿಗಳು, ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net